ಹಾಲು- ತುಪ್ಪ ಮಾರುವ ನೆಪದಲ್ಲಿ ಮನೆ ದೋಚುತ್ತಿದ್ದವನ ಬಂಧನ, 1ಕೆಜಿ ಚಿನ್ನಾಭರಣ ವಶ

Source: S.O. News Service | By MV Bhatkal | Published on 19th October 2018, 3:22 PM | State News |

ಬೆಂಗಳೂರು: ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆ ಮಾಲೀಕರ ವಿಶ್ವಾಸ ಗಳಿಸಿ ಮನೆಯವರು ಇಲ್ಲದ ಸಮಯ ನೋಡಿ ಕೈಗೆ ಸಿಕ್ಕ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಂಜಯನಗರ ಠಾಣೆ ಪೊಲೀಸರು ಆರೋಪಿಯಿಂದ 45 ಲಕ್ಷ ರೂ.ಮೌಲ್ಯದ ಒಂದು ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್‍ನ ಮುರಾದ್‍ನಗರದ ನಿವಾಸಿ ಮೀನು ಅಲಿಯಾಸ್ ಚಾಚಾಜಿ (51) ಬಂಧಿತ ಆರೋಪಿ. ಸಂಜಯನಗರ ನಿವಾಸಿ ಅನಿಲ್ ಎಂಬುವವರು ಕಳೆದ ಆ.13ರಂದು ತಮ್ಮ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮನೆಗೆ ಲಾಕ್ ಮಾಡಿಕೊಂಡು ಊರಿಗೆ ತೆರಳಿದ್ದರು. ಅದೇ ದಿನ ರಾತ್ರಿ 10.30ಕ್ಕೆ ವಾಪಸಾದಾಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದು ಕಂಡುಬಂತು. ಜೆಸಿ ನಗರ ಉಪವಿಭಾಗದ ಎಸಿಪಿ ಶಿವಶಂಕರ್ ಅವರ ಮಾರ್ಗದರ್ಶನದಲ್ಲಿ ಸಂಜಯನಗರ ಇನ್ಸ್‍ಪೆಕ್ಟರ್ ಪ್ರಶಾಂತ್ ಆರ್.ವರ್ಣಿ ಮತ್ತವರ ಸಿಬ್ಬಂದಿಗಳು ಆರೋಪಿ ಚಾಚಾಜಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆತ ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಯವರ ವಿಶ್ವಾಸ ಗಳಿಸಿ ಅವರು ಇಲ್ಲದ ಸಮಯ ಸಾಧಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಾಹಿತಿ ಬಾಯಿಬಿಟ್ಟಿದ್ದಾನೆ. ಚಾಚಾಜಿ ನೀಡಿದ ಮಾಹಿತಿ ಮೇರೆಗೆ 45 ಲಕ್ಷ ರೂ. ಮೌಲ್ಯದ 1 ಕೆಜಿ 365 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಸಂಜಯನಗರ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...