ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರದ ವಿವಿಧ ಯೋಜನೆಗಳ ಅರಿವು ಜನರಿಗೆ ತಲುಪಬೇಕು

Source: sonews | By sub editor | Published on 25th July 2018, 6:25 PM | Coastal News | Don't Miss |

ಭಟ್ಕಳ: ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ರೂಪಿಸಿದ್ದು ಜನರಿಗೆ ಇದರ ಮಾಹಿತಿ ಸರಿಯಾಗಿ ತಲುಪುತ್ತಿಲ್ಲ ಈ ಕಾರಣಕ್ಕಾಗಿಯೆ ಇಂದು ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. 

ಅವರು ಬುಧವಾರ ಇಲ್ಲಿನ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದು ಸರ್ಕಾರದ ವಿವಿಧ ಯೋಜನೆಗಳ ಅರಿವು ಮೂಡಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 

ಭಟ್ಕಳ ತಾಲೂಕಿನ ಅಲ್ಪಸಂಖ್ಯಾತ ಸಮುದಾಯ ಶಿಕ್ಷಿತ ಸಮುದಾಯವಾಗಿದ್ದು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಹೆಚ್ಚಿನ ಆಸಕ್ತಿವಹಿಸಬೇಕು, ವಿವಿಧ ಸಂಘಸಂಸ್ಥೆಗಳ ಮುಖಂಡರು ಯೋಜನೆಗಳ ಮಾಹಿತಿಯನ್ನು ಎಲ್ಲರಿಗೂ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದರು. 

ತಹಸಿಲ್ದಾರ ವಿ.ಎನ್.ಬಾಡ್ಕರ್ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಇರುವ ಯೋಜನೆಗಳು ಭಟ್ಕಳ ತಾಲೂಕಿನಾದ್ಯಂತ ಪರಿಣಾಮಕಾರಿ ಅನುಷ್ಠಾನಗೊಳಿಸುವ ಹೊಣೆ ಸಮುದಾಯದ ಯುವಕರದ್ದಾಗಿದ್ದು ಇದರ ಸಂಪೂರ್ಣ ಪ್ರಯೋಜನ ಪಡೆಯಲು ಮುಂದೆ ಬರಬೇಕು, ಭಟ್ಕಳದಲ್ಲಿ ಮೆಟ್ರಿಕ್ ನಂತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸುಮಾರು 9 ಗುಂಟೆ ಜಾಗವನ್ನು ಮಂಜೂರು ಮಾಡಲಾಗಿದ್ದು ಹಾಸ್ಟೆಲ್ ಕಟ್ಟಡಕ್ಕಾಗಿ ಸಮುದಾಯದ ಪ್ರತಿನಿಧಿಗಳು ಪ್ರಯತ್ನಪಡಬೇಕು ಎಂದರು. 

ತಾಲೂಕು ವಿಸ್ತೀರ್ಣಾಧಿಕಾರಿ ಶಮ್ಸುದ್ದೀನ್ ಅಲ್ಪಸಂಖ್ಯಾತರ ವಿವಿಧ ಯೋಜನೆ, ಅವುಗಳು ಪಡೆಯಲು ಇರುವ ಮಾನದಂಡ, ಆರ್ಹತೆ ಮತ್ತಿತರ ವಿಷಯಗಳನ್ನು ವಿಸ್ತಾರವಾಗಿ ಸಾರ್ವಜನಿಕರ ಮುಂದಿಟ್ಟು ಈ ಎಲ್ಲ ಯೋಜನೆಗಳನ್ನು ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಝೀಮ್ ಸಂಸ್ಥೆಯ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ತಂಝೀಮ್ ಮುಖಂಡರಾದ ಫಾರೂಖ್ ಪಟೇಲ್ ಶಾಬಂದ್ರಿ, ಮೊಹತೆಶಮ್ ಜಾಫರ್, ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಖ್ ಮಟ್ಟಾ, ಜಾಲಿ ಗ್ರಾ.ಪಂ ಅಧ್ಯಕ್ಷ ಆದಂ ಪಣಂಬೂರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಂಝೀಮ್ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ಅಲ್ತಾಫ್ ಖರೂರಿ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಮೌಲಾನ ಸೈಯ್ಯದ್ ಯಾಸಿರ್ ನದ್ವಿ ಬರ್ಮಾವರ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ವಿವಿಧ ಯೋಜನೆಗಳ ಮಾಹಿತಿ ಪುಸ್ತಕವನ್ನು ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಬಿಡುಗಡೆಗೊಳಿಸಿದರು.

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ...

ಶಿರಾಲಿ ಹೆದ್ದಾರಿ ಅಗಲಿಕರಣ;ಸಾರ್ವಜನಿಕರ ಬೇಡಿಯಂತೆ 30 ರ ಬದಲು 45ಮೀಟರ್ ವಿಸ್ತರಣೆ-ಕೇಂದ್ರ ಸಚಿವ ಅನಂತ್ ಭರವಸೆ

ಭಟ್ಕಳ: ಶಿರಾಲಿ ಭಾಗದ ಗ್ರಾಮಸ್ಥರ ಬೇಡಿಕೆಯಂತೆ ರಾ.ಹೆ.66 ರ ಅಗಲೀಕರಣವನ್ನು 30ಮೀಟರ್ ಬದಲು 45ಮೀಟರ್ ಗೆ ವಿಸ್ತರಿಸಲು ಅಗತ್ಯ ಕ್ರಮಗಳನ್ನು ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...