'ಬಿಜೆಪಿಯವರು ಜನವಿರೋಧಿಗಳು. ಅವರನ್ನು ನಂಬಬೇಡಿ’- ಸಿದ್ದರಾಮಯ್ಯ

Source: sonews | By Staff Correspondent | Published on 15th February 2019, 10:43 PM | State News | Don't Miss |

ಶ್ರೀನಿವಾಸಪುರ: ಸಮಾಜದ ಎಲ್ಲ ಸಮುದಾಯಗಳಿಗೂ ಸಮುದಾಯ ಭವನ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದಲೇ ನಮ್ಮ ಸರ್ಕಾರ ಎಲ್ಲ ವರ್ಗದ ಜನರಿಗೂ ಸಮುದಾಯ ಭವನ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡಿತು ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಕನಕ ನಗರದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕನಕ ಸಮುದಾಯ ಭವನ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, 'ಬಿಜೆಪಿಯವರು ಜನವಿರೋಧಿಗಳು. ಅವರನ್ನು ನಂಬಬೇಡಿ. ಬಂದರೆ ಮುಂದೆ ಕಳಿಸಿಎಂದು ಹೇಳಿದರು.

ನಾನು ಮುಖ್ಯ ಮಂತ್ರಿಯಾಗಿದ್ದಾಗ ಎರಡು ಸಲ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರೈತ ಸಾಲ ಮನ್ನಾ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ಆದರೆ ಅವರು ಒಪ್ಪಲಿಲ್ಲ. ಮಲ್ಯ ಅವರಂಥ ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ಸಹಾಯ ಮಾಡುತ್ತಾರೆ. ಬಡವರ ಬಗ್ಗೆ ಚೂರು ಕರುಣೆ ತೋರುವುದಿಲ್ಲ. ಇನ್ನು ಮನ್ಕಿ ಬಾತ್ನಿಂದ ಯಾವ ಪ್ರಯೋಜವೂ ಆಗುವುದಿಲ್ಲಎಂದು ಹೇಳಿದರು.

ಕೇಂದ್ರ ಬಜೆಟ್ಚುನಾವಣೆ ದೃಷ್ಟಿ ಹೊಂದಿದೆ. ಓಟು ಗಳಿಸುವ ಉದ್ದೇಶದಿಂದ ರೈತರಿಗೆ ರೂ.6000 ಕೊಡುವುದಾಗಿ ಪ್ರಕಟಿಸಲಾಗಿದೆ. ಚುನಾವಣೆ ಹೊಸ್ತಿಲಲ್ಲಿ ಕೊಡುವ ಬದಲು, ಅವರು ಅಧಿಕಾರಕ್ಕೆ ಬಂದ ಮೊದಲ ವರ್ಷವೇ ಏಕೆ ಕೊಡಲಿಲ್ಲ ಎಂದು ಪ್ರಶ್ನಿಸಿದರು. ಕೆರೆಯ ನೀರನ್ನು ಕೆರೆಗೆ ಚೆಲ್ಲುವುದು ಸರ್ಕಾರದ ಕೆಲಸ. ಜನರು ನೀಡುವ ತೆರಿಗೆ ಹಣವನ್ನು ಕಷ್ಟದಲ್ಲಿರುವ ಸಮುದಾಯಕ್ಕೆ ನೀಡಲು ಹಿಂಜರಿಯ ಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬುದ್ದಿ ಮಾತ್ರ ಬರಲಿಲ್ಲ. ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನ ಸಫಲವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ಕುಮಾರ್ಬಡವರ ಬಗ್ಗೆ ಕಾಳಜಿ ಇರುವ ಅಪರೂಪದ ವ್ಯಕ್ತಿ. ಅವರ ಮಾತಿನಂತೆ ನಾನು ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರ್ಧ ಗಂಟೆಯಲ್ಲಿ 6ಪ್ರಮುಖ ಕಾರ್ಯಕ್ರಮ ಪ್ರಕಟಿಸಿದೆ ಎಂದು ಹೇಳಿದರು.

ವಿಧಾನ ಸಭಾಧ್ಯಕ್ಷ ಕೆ.ಆರ್‌.ರಮೇಶ್ಕುಮಾರ್ಮಾತನಾಡಿ, ‘ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಯಾಗಿದ್ದಾಗ ಎತ್ತಿನ ಹೊಳೆ ನೀರಾವರಿ ಯೋಜನೆಗೆ 13 ಸಾವಿರ ಕೋಟಿ ಹಣ ಮಂಜೂರು ಮಾಡಿದರು. ತಾಲ್ಲೂಕಿನ 18 ಸಾವಿರ ಮನೆ ನೀಡಿದರು. ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಒಪ್ಪಿಗೆ ಸೂಚಿಸಿದರು. ಮಾತು ತುಸು ಒರಟೆಣಿಸಿದರೂ, ಮನಸ್ಸು ಮಾತ್ರ ಮೃದು. ಅವರು ನನಗೆ ಪ್ರೇರಣೆ ನೀಡಿ ಶಕ್ತಿ ತುಂಬಿದರುಎಂದು ಹೇಳಿದರು.

ಸರ್ಕಾರ ಜಿಲ್ಲೆಯಲ್ಲಿ ಮೆಗಾ ಡೇರಿ ನಿರ್ಮಿಸಲು ರೂ.50 ಲಕ್ಷ ಮಂಜೂರು ಮಾಡಿದೆ. ಎತ್ತಿನ ಹೊಳೆ ನೀರಾವರಿ ಯೋಜನೆ ಜಾರಿಗೆ ತರಲು ಸಾವಿರಾರು ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಬೇಕು. ಹಾಗಾಗಿ ಸರ್ಕಾರ ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿದೆ. ಅದಕ್ಕೆ ರಾಷ್ಟ್ರಪತಿಗಳ ಅಂಕಿತ ಬೀಳಬೇಕಾಗಿದೆ. ಇನ್ನೆರಡು ವರ್ಷಗಳಲ್ಲಿ ಎತ್ತಿನ ಹೊಳೆಯ ನೀರು ಇಲ್ಲಿನ ಕೆರೆಗಳಿಗೆ ಹರಿಯಲಿದೆ ಎಂದು ಹೇಳಿದರು.

ಸಂಸದ ಕೆ.ಎಚ್‌.ಮುನಿಯಪ್ಪ ಮಾತನಾಡಿ, ರಾಜಕೀಯವಾಗಿ ಕೋಮು ಸಕ್ತಿಗಳನ್ನು ಮಣಿಸಲು ಜಾತ್ಯಾತೀತ ಶಕ್ತಿಗಳು ಒಂದಾಗಬೇಕು. ಉತ್ತರ ಭಾರತದಲ್ಲಿ ಜಾತಿವಾದಿಗಳಿಗೆ ತಕ್ಕ ಪಾಠ ಕಲಿಸಲಾಗಿದೆ. ದಕ್ಷಿಣ ಭಾರದಲ್ಲಿ ಕೆಲಸ ನಡೆಯಲಿದೆ. ಅದಕ್ಕೆ ಸಾಂಘಿಕ ಪ್ರಯತ್ನ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ವಿಧಾನ ಪರಿಷತ್ಸದಸ್ಯರಾದ ತೂಪಲ್ಲಿ ಆರ್‌.ಚೌಡರೆಡ್ಡಿ, ಎಚ್‌.ಎಂ.ರೇವಣ್ಣ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್ಮಾತನಾಡಿದರು.

ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಮುಖಂಡರಾದ ರಾಜೇಂದ್ರ, ರಾಮಚಂದ್ರಪ್ಪ, ವೆಂಕಟೇಶಗೌಡ, ವೆಂಕಟೇಶಗೌಡ, .ನಾಗರಾಜ್‌, ದಿಂಬಾಲ ಅಶೋಕ್, ಎಲ್‌.ಗೋಪಾಲಕೃಷ್ಣ, ಎನ್‌.ಜಿ.ಬ್ಯಾಟಪ್ಪ, ಡಾ.ಸಿ.ಸಿ.ರಾಮೇಗೌಡ, ರಾಮಚಂದ್ರಪ್ಪ, ಚಿಕ್ಕಹನುಮಪ್ಪ, ಅನಿಲ್ಕುಮಾರ್‌, ಎನ್‌.ರಾಜೇಂದ್ರ ಪ್ರಸಾದ್‌, ಬಿ.ಎಲ್ಪ್ರಕಾಶ್‌. ಕೆ.ಕೆ.ಮಂಜು ಅಕ್ಬರ್ ಷರೀಫ್ಇದ್ದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...