ಆತ್ಮಹತ್ಯೆಗೆ  ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವು

Source: sonews | By Staff Correspondent | Published on 4th January 2019, 11:44 PM | Coastal News | Don't Miss |

ಮುಂಡಗೋಡ : ರೈತನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಮುಡಸಾಲಿ ಗ್ರಾಮದಲ್ಲಿ ನಡೆದಿದೆ.

ನಿಂಗನಗೌಡ ಪಾಟೀಲ(52) ವಿಷಸೇವಿಸಿ ಮೃತಪಟ್ಟ ರೈತನಾಗಿದ್ದಾನೆ,  ಸೋಸೈಟಿಯಲ್ಲಿ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸುಮಾರು 2.50ಲಕ್ಷ ಸಾಲ ಹೊಂದಿದ್ದ ಎಂದು ಹೇಳಲಾಗಿದೆ ತನ್ನ 3 ಎಕರೆ ಹೊಲದಲ್ಲಿ ಬತ್ತ ಹಾಗೂ ಗೋವಿನ ಜೋಳ ಬೆಳೆದಿದ್ದ. ಕೀಟಗಳ ಬಾದೆಯಿಂದ  ಬೆಳೆ ಬರದ ಕಾರಣದಿಂದ ಚಿಂತಿತನಾಗಿದ್ದ. ಸಾಲ ತೀರಿಸುವುದು ಹೇಗೆ ಎಂದು ಮನನೊಂದಿದ್ದ ಎಂದು ಹೇಳಲಾಗುತ್ತಿದೆ. ದಿನಾಂಕ 1-1-19 ರಂದು ತನ್ನ ಹೊಲದಲ್ಲಿ ವಿಷ ಸೇವಿಸಿ ದ್ದ ಎಂದು ಹೇಳಲಾಗಿದೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆನೀಡಿ ಹುಬ್ಬಳ್ಳಿ ಕಿಮ್ಸ ಗೆ ದಾಖಲಿಸಿಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಕಾತೂರ ಗ್ರಾಮ ಪಂಚಾಯತ್ ಅಧ್ಯಕ್ಷ ಪೀರಣ್ಣಾ ಲಕ್ಮಾಪೂರ ತಿಳಿಸಿದ್ದಾರೆ. ಈ ಕುರಿತು ಗುರುವಾರ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...