ಭರ್ತಿಯಾದ ಸೂಪಾ ಜಲಾಶಯ ಪ್ರವಾಹ ಮುನ್ನೆಚ್ಚರಿಕೆ

Source: sonews | By sub editor | Published on 8th August 2018, 11:47 PM | Coastal News | Don't Miss |

ಕಾರವಾರ:  ಕಾಳಿನದಿ ಯೋಜನೆ 1 ನೇ ಹಂತ ಸೂಪಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸೂಪಾ ಜಲಾಶಯದ ಗರಿಷ್ಟ ಮಟ್ಟವು 564.00 ಮೀಟರಗಳಾಗಿದ್ದು, ಈಗಿನ ಜಲಾಶಯ ಮಟ್ಟವು ದಿನಾಂಕ : 24-07-2018 ರಂದು ಬೆಳಿಗ್ಗೆ 8 ಗಂಟೆಗೆ 550.90 ಮೀಟರಗಳಿರುತ್ತದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ಶೀಘ್ರವೇ ತಲುಪುವ ಸಾದ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. 
         
ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು. ಸೂಪಾ ಆಣೆಕಟ್ಟೆಯ ಕೆಳಭಾಗದ ನದಿಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
        
 

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...