ದಸರಾ ಉತ್ಸವವನ್ನು ವಿಶಿಷ್ಠವಾಗಿ ಸಂಘಟಿಸುತ್ತಿರುವ ಯುವ ಸಂಘಟಕರ ಕಾರ್ಯ ಶ್ಲಾಘನೀಯ:ಡಾ,ಆರ್. ನರಸಿಂಹ ಮೂರ್ತಿ

Source: S.O. News Service | By MV Bhatkal | Published on 21st October 2018, 7:14 PM | Coastal News | Don't Miss |

ಭಟ್ಕಳ:ಶಿರಾಲಿಯ ಸಾಲೆಮನೆಯ ಮಠದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಉತ್ಸವ ಅತ್ಯಂತ ವಿಶಿಷ್ಟವಾದುದು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ದೆ, ಪ್ರತಿಭಾ ಪುರಸ್ಕಾರ, ಕಲಾವಿದರಿಗೆ, ನಿವೃತ್ತರಿಗೆ ಸನ್ಮಾನಿಸುವಂತಹಾ ಉಪಯುಕ್ತ ಕಾರ್ಯಕ್ರಮವನ್ನು ಸಂಘಟಿಸುವು ಯುವ ಸಂಘಟಕರ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್ ನರಸಿಂಹ ಮೂರ್ತಿ ನುಡಿದರು. ಅವರು ದಸರಾ ಉತ್ಸವದ ಅಂಗವಾಗಿ  ಶಿರಾಲಿಯ ಸಾಲೆಮನೆಯ ಮಠದ ಶ್ರೀ ಸಿದ್ಧಿವಿನಾಯಕ ದೇವಾಲಯ ಹಾಗು ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ  ನಡೆದ ವಿವಿದ ಸ್ಪರ್ದಾ ವಿಜೇತರುಗಳ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ ಮಕ್ಕಳ ಪ್ರತಿಭೆಗಳನ್ನು ಪೋಷಿಸುವ, ಪುರಸ್ಕರಿಸುವ ಕಾರ್ಯವನ್ನು ಮಾಡುತ್ತಿರುವ ಮಠದ ಸಿದ್ಧಿವಿನಾಯಕ ದೇವಸ್ಥಾನದ ಯುವ ಸಂಘಟಕರ ಉತ್ಸಾಹ ನಿಜಕ್ಕೂ ಪ್ರಶಂಸನಾರ್ಹ. ಇಂತಹ ಉತ್ಸಾಹಿಗಳ ಪ್ರತಿಭೆಗಳ ಪೋಷಿಸುವ ಕಾರ್ಯಕ್ಕೆ ಸಾಹಿತ್ಯ ಪರಿಷತ್ತು ಕೈ ಜೋಡಿಸುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ನುಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ತಾಲೂಕಾ ಪಂಚಾಯತ ಸದಸ್ಯೆ ಮಾಲತಿ ದೇವಾಡಿಗ, ಸ್ಥಳೀಯ ಉದ್ಯಮಿ ಅಶೋಕ ಕಾಮತ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಮೋಹನ ದೇವಾಡಿಗ ಮಾತನಾಡಿದರು. ಕಾರ್ಯಕ್ರಮದಲ್ಲಿ ದಸರಾ ಹಬ್ಬದ ಪ್ರಯುಕ್ತ ನಡೆದ ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನವನ್ನು ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕತಿಸಲಾಯಿತು. ಇದೇ ಸಂದರ್ಭದಲ್ಲಿ ಮಠದ ಶ್ರೀ ಸಿದ್ಧಿವಿನಾಯಕ ದೇವಾಲಯದ ವತಿಯಿಂದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಇವರನ್ನು ಸನ್ಮಾನಿಸಲಾಯಿತು.  ಶಿಕ್ಷಕ  ಕೇಶವ ದೇವಡಿಗ ವರದಿಯನ್ನು ವಾಚಿಸಿದರೆ  ದೇವಿದಾಸ ನಾಯ್ಕ  ನಿರ್ವಹಿಸಿದರು. ಕುಮಾರಿ ಸಾರಿಕಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...