ಗ್ರಾಮ ಪಂಚಾಯ್ತಿಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲವು

Source: sonews | By Staff Correspondent | Published on 4th January 2019, 11:34 PM | State News | Don't Miss |

ಶ್ರೀನಿವಾಸಪುರ: ತಾಲ್ಲೂಕು ಮತ್ತು ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಆಡಳಿತವಿದ್ದರೂ ಗೌನಿಪಲ್ಲಿ ಗ್ರಾಮ ಪಂಚಾಯ್ತಿಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನೈಂತಾಜ್ ರವರು ಕಾಂಗ್ರೆಸ್ ಅಭ್ಯರ್ಥಿಯಾದ ತಮ್ಮ ಪ್ರತಿಸ್ಪರ್ಧಿ ಫರಹಾನ ವಿರುದ್ದ 40 ಮತಗಳ ಅಂತರದಿಂದ ಗೆಲವು ಪಡೆದಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯ್ತಿಯ ತೆರವಾಗಿದ್ದ ಗೌನಿಪಲ್ಲಿ-2ನೇ ಸ್ಥಾನಕ್ಕೆ  ಜನವರಿ 2 ರಂದು ಉಪ ಚುನಾವಣೆ ನಡೆದಿತ್ತು. ಸಂಬಂದಿಸಿದಂತೆ ತಾಲ್ಲೂಕು ಕಚೇರಿಯಲ್ಲಿನ ಚುನಾವಣಾ ಶಾಖಾ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಮತೆಣಿಕೆ ಮಾಡಲಾಯಿತು. ಸಂಬಂದಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು 1092 ಮತದಾರರು ಇದ್ದು ಇದರಲ್ಲಿ 901 ಮತಗಳ ಚಲಾವಣೆಯಾಗಿತ್ತು. ಮತಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ನೈಂತಾಜ್ ರವರಿಗೆ 462 ಮತಗಳು ದೊರೆತು ಜಯಶಾಲಿಯಾಗಿದ್ದರೆ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಫರಹಾನ ರವರು 422 ಮತಗಳನ್ನು ಪಡೆದು ಫರಾಭವಗೊಂಡಿದ್ದಾರೆ ಉಳಿದಂತೆ 17 ಮತಗಳು ತಿರಸ್ಕøತಗೊಂಡಿವೆ. 

ಚುನಾವಣಾಧಿಕಾರಿಗಳಾಗಿ  ಗೌನಿಪಲ್ಲಿ ಸರ್ಕಾರಿ ಪದವಿ ಪೂವ್ ಕಾಲೇಜು ಪ್ರಾಂಶುಪಾಲ ಬಿ.ಸೇವ್ಯಾ ನಾಯಕ್ ಬೈರಗಾನಪಲ್ಲಿ ಸರ್ಕಾರಿ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಕೆ.ಎನ್.ರಾಮಚಂದ್ರಪ್ಪ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ಇದೇ ವೇಳೆ ತಹಶೀಲ್ದಾರ್ ಬಿ.ಎಸ್.ರಾಜೀವ್, ಚುನಾವಣಾ ಶಿರಸ್ಥೆದಾರ್ ಕೆ.ಸಿ.ಸುರೇಶ್ ಹಾಜರಿದ್ದರು. ಈ ಸಮಯದಲ್ಲಿ ಗೆದ್ದ ಅಭ್ಯರ್ಥಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.

ಗೌನಿಪಲ್ಲಿ ಗ್ರಾಮ ಪಂಚಾಯ್ತಿಯ ಸದಸ್ಯರೊಬ್ಬರು ಮೃತಪಟ್ಟಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತಾದರೂ ಹಿಂದೆ ಈ ಸ್ಥಾನ ಕಾಂಗ್ರೆಸ್ ಪಾಲಾಗಿತ್ತು. ಸದರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳು ಶತಾಯ ಗತಾಯ ಈ ಸ್ಥಾನ ಪಡೆಯಲು ಇನ್ನಿಲ್ಲದ ಕಸರತ್ತನ್ನು ಮಾಡಿದ್ದರು. ಒಂದು ರೀತಿಯಲ್ಲಿ ತಾಲ್ಲೂಕಿನಲ್ಲಿ ಆಡಳಿತಾರೂಡ ಕಾಂಗ್ರೆಸ್ ಗ್ರಾಮ ಪಂಚಾಯ್ತಿಯಲ್ಲಿ ಸಹ ಕಾಂಗ್ರೆಸ್ ಆಡಳಿತವಿರುವುದರಿಂದ ಜೆಡಿಎಸ್‍ಗೆ ನಿರಾಸೆಯಿದ್ದರೂ ಪ್ರಯತ್ನ ಮಾಡಿದ ಹಿನ್ನಲೆಯಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್ ಸದಸ್ಯರನ್ನು ಗೆಲ್ಲಿಸಿಕೊಂಡಿದೆ. 

ಗೌನಿಪಲ್ಲಿ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 23 ಸ್ಥಾನಗಳು ಇದ್ದು ಇದರಲ್ಲಿ ಕಾಂಗ್ರೆಸ್ 14 ಸ್ಥಾನಗಳನ್ನು ಪಡೆದುಕೊಂಡು ಆಡಳಿತ ನಡೆಸುತ್ತಿದ್ದು ಜೆಡಿಎಸ್ 9ಸ್ಥಾನಗಳನ್ನು ಪಡೆದುಕೊಂಡು ಪ್ರತಿಪಕ್ಷವಾಗಿ ಇತ್ತು. ಇದೀಗ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದರಿಂದ ಕಾಂಗ್ರೆಸ್ ವಶದಲ್ಲಿದ್ದ ಸ್ಥಾನವನ್ನು ಜೆಡಿಎಸ್ ತನ್ನದಾಗಿಸಿಕೊಂಡಿದೆ ಇದರಿಂದ ಕಾಂಗ್ರೆಸ್ ಒಂದು ಸ್ಥಾನ ಕಳೆದುಕೊಂಡು 13 ಸದಸ್ಯರನ್ನು ಹೊಂದಿದ್ದರೂ ಗ್ರಾಮ ಪಂಚಾಯ್ತಿ ಆಡಳಿತವನ್ನು ಕಾಂಗ್ರೆಸ್ ನಡೆಸುವಂತಾಗಿದೆ. ಆದರೆ ಜೆಡಿಎಸ್ 9 ಸದಸ್ಯ ಬಲದ ಜೊತೆ ಉಪ ಚುನಾವಣೆಯಲ್ಲಿ ಗೆಲವು ಪಡೆದಿದ್ದರಿಂದ 10 ಸ್ಥಾನಗಳನ್ನು ಗಟ್ಟಿಗೊಳಿಸಿಕೊಂಡಿದೆ.

ಗೌನಿಪಲ್ಲಿ ಗ್ರಾಮ ಪಂಚಾಯ್ತಿ ಉಪಚುನಾವಣೆಯನ್ನು ಕಾಂಗ್ರೆಸ್ ಜೆಡಿಎಸ್‍ಗಳೆರಡೂ ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದರು. ಗೆಲವಿನ ಲೆಕ್ಕಾಚಾರದಲ್ಲಿ ಈ ಎರಡು ಪಕ್ಷಗಳ ಪರವಾಗಿ ಲಕ್ಷಾನುಗಟ್ಟಲೆ ಬೆಟ್ಟಿಂಗ್ ವ್ಯವಹಾರ ಸಹ ನಡೆದಿದೆ. ಸುಮಾರು 20 ಲಕ್ಷಗಳಿಗೂ ಮೇಲ್ಪಟ್ಟು ಬೆಟ್ಟಿಂಗ್ ಕಟ್ಟಿದ್ದಾರೆ ಹಾಗು ಸುಮಾರು 15ಕ್ಕೂ ಮೇಲ್ಪಟ್ಟು ದ್ವಿಚಕ್ರ ವಾಹನಗಳ ಅದಲು ಬದಲು ಬೆಟ್ಟಿಂಗ್ ನಡೆದಿದೆ ಎನ್ನಲಾಗಿದೆ ಹೀಗೆ ಉಪಚುನಾವಣೆಯನ್ನು  ಎರಡು ರಾಜಕೀಯ ಪಕ್ಷಗಳು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದರೂ ಅಂತಿಮವಾಗಿ ಗೆಲವು ಜೆಡಿಎಸ್‍ಗೆ ಒಲಿದು ಬಂದಿದೆ.


 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...