ಮಳೆಗಾಲ ಮುಗಿದರೂ ಮುಗಿಯದ ಪಳ್ಳಿಹೊಳೆ ಕಾಮಗಾರಿ; ಸಾರ್ವಜನಿಕರಿಂದ ಆಕ್ರೋಶ

Source: sonews | By Staff Correspondent | Published on 7th October 2018, 3:51 PM | Coastal News | Don't Miss |

ಭಟ್ಕಳ: ತಾಲೂಕಿನ ಶಿರಾಲಿ ಅಳ್ಳೆಕೋಡಿಯನ್ನು ಸಂಪರ್ಕಿಸುವ ಪಳ್ಳಿಹೊಳೆ ಸೇತುವೆ ಕಾಮಗಾರಿ ಕೈಗೆತ್ತಿಕೊಂಡು ಐದಾರು ತಿಂಗಳುಗಳೇ ಗತಿಸಿದ್ದು ಮಳೆಗಾಲ ಮುಗಿದರೂ ಇನ್ನೂ ತನಕ ಕಾಮಗಾರಿ ಪೂರ್ಣಗೊಳ್ಳುವ ಯಾವುದೇ ಲಕ್ಷಣಗಳು ಗೋಚರಿಸಿದೆ ಆ ಭಾಗದ ಸಾರ್ವಜನಿಕರು ಆಕ್ರೋಶಿತರಾಗಿದ್ದು ಪ್ರತಿಭಟನೆಯ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಶಿರಾಲಿಯ ಪಳ್ಳಿಹೊಳೆ ಸೇತುವೆ ಶಿಥಿಲಗೊಂಡು ಸಾರ್ವಜನಿಕರ ಆಗ್ರಹದ ಮೇರೆಗೆ ಆಗಿನ ಶಾಸಕ ಮಾಂಕಾಳ ವೈದ್ಯ ಆಸಕ್ತಿವಹಿಸಿ ಕಾಮಗಾರಿಯನ್ನು ಆರಂಭಿಸಿದ್ದು ಮಳೆಗಾಲದ ಕುಂಟು ನೆಪ ಹೇಳಿಕೊಂಡು ಕಾಮಗಾರಿಯನ್ನು ಅರ್ಧದಲ್ಲೆ ನಿಲ್ಲಿಸಿ ಕೈತೊಳೆದುಕೊಂಡಿದ್ದ ಗುತ್ತಿಗೆದಾರರು ಮಳೆಗಾಲ ಮುಗಿದರೂ ಕಾಮಗಾರಿಯನ್ನು ಆರಂಭಿಸದೆ ಅದಕ್ಕಾಗಿ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾತ್ಕಾಲಿಕವಾಗಿ ನಿರ್ಮಿಸಿದ ರಸ್ತೆಯು ಮಳೆಗ ಕೊಚ್ಚಿಕೊಂಡು ಹೋಗಿದ್ದು ಇತಿಹಾಸ ಪ್ರತಿಸಿದ್ದ ಅಳ್ವೆಕೋಡಿ ದೇವಸ್ಥಾನಕ್ಕೆ ನೂರಾರು ಭಕ್ತರು ದಿನಾಲೂ ಓಡಾಡುವ ಈ ಸೇತುವೆ ತನ್ನ ಸಂಪರ್ಕ ಕಳೆದುಕೊಂಡಿದ್ದರಿಂದಾಗಿ ಆ ಭಾಗದ ಶಾಲಾಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ಭಕ್ತರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಅಲ್ಲದೆ ನಿತ್ಯವೂ ನೂರಾರು ಮಂದಿ ಓಡಾಡುವ ಸೇತುವೆಯ ಕಾಮಗಾರಿ ಆದಷ್ಟುಬೇಗನೆ ಪೂರ್ಣಗೊಳಿಸಬೇಕೆಂಬ ಆಗ್ರಹ ಎಲ್ಲಡೆಯಿಂದ ಕೇಳಿ ಬರುತ್ತಿದೆ. 

ಸೇತುವೆ ಕಾಮಗಾರಿ ಆದಷ್ಟು ಬೇಗನೆ ಆರಂಭಿಸದೆ ಹೋದರೆ ಉಗ್ರಹೋರಾಟ ಮಾಡುವುದಾಗಿ ಸಾರ್ವಜನಿಕರು ಗುತ್ತಿಗೆದಾರರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...