ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸಬೇಕು.- ವಿಧಾನ ಸಭೆಯ ಅಧ್ಯಕ್ಷ ಕೆ.ಆರ್.ರಮೇಶ್‌ ಕುಮಾರ್

Source: sonews | By sub editor | Published on 12th September 2018, 5:16 PM | State News | Don't Miss |

ಶ್ರೀನಿವಾಸಪುರ: ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸಬೇಕು. ಅದು ಹೆಮ್ಮರವಾಗಿ ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ವಿಧಾನ ಸಭೆಯ ಅಧ್ಯಕ್ಷ ಕೆ.ಆರ್.ರಮೇಶ್‌ ಕುಮಾರ್ ಹೇಳಿದರು.

  ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗಿದ್ದು, ಮಕ್ಕಳು ಅದರ ಪ್ರಯೋಜನ ಪಡೆದುಕೊಳ್ಳಬೇಕು. ತಮ್ಮಲ್ಲಿನ ಕೌಶಲ್ಯ ಪ್ರದರ್ಶ ನೀಡುವುದರ ಮೂಲಕ ನೋಡುಗರ ಮೆಚ್ಚುಗೆ ಗಳಿಸಬೇಕು ಎಂದು ಹೇಳಿದರು.

  ಮಕ್ಕಳು ಪಠ್ಯ ವಿಷಯದ ಜೊತೆಗೆ, ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ತೋರಬೇಕು. ನೈತಿಕವಾಗಿ ಬೆಳೆಯಬೇಕು. ಇದಕ್ಕೆ ಶಿಕ್ಷಕರು ಹಾಗೂ ಪೋಷಕರು ಸಹಕರಿಸಬೇಕು. ಮಕ್ಕಳು ಹಂತ ಹಂತವಾಗಿ ಉನ್ನತಿ ಸಾಧಿಸಬೇಕು ಎಂದು ಹೇಳಿದರು.

ಶಾಲೆಯ ಕಾಂಪೌಂಡ್, ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯ ನೀಡುವಂತೆ ಹಾಗೂ ಶಾಲೆಯ ಮುಂದೆ ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಯಿತು.

ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಷುನ್ನೀಸಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರೆಡ್ಡಿ, ಸಿಆರ್‌ಪಿ ಕಲಾ ಶಂಕರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಲ್‌.ವೆಂಕಟರೆಡ್ಡಿ, ಮುಖಂಡರಾದ ಆಲವಟ್ಟ ಮಂಜುನಾಥರೆಡ್ಡಿ, ಕೆ.ಕೆ.ಮಂಜು, ಅಯ್ಯಪ್ಪ, ಮುನಿವೆಂಕಟಪ್ಪ, ಪ್ರಾಂಶುಪಾಲ ಎಸ್‌.ಸುಬ್ರಮಣಿ, ಶಿಕ್ಷಕ ಬೈರೇಗೌಡ ಇದ್ದರು.

ವರದಿ ಶಬ್ಬೀರ್ ಅಹ್ಮದ್  ಶ್ರೀನಿವಾಸಪುರ

Read These Next

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...