ಪುಲ್ವಾಮ ದಾಳಿಗೆ 2 ದಿನಗಳ ಮೊದಲು ಉಗ್ರರಿಂದ ಬೆದರಿಕೆಯ ವಿಡಿಯೋ ಹರಿಯಬಿಡಲಾಗಿತ್ತು..

Source: sonews | By Staff Correspondent | Published on 15th February 2019, 6:09 PM | National News |

ಜಮ್ಮು: ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮೂಲಕ ಕಳೆದ ಎರಡು ದಿನಗಳಿಂದ ಹರಿದಾಡುತ್ತಿದ್ದ ವಿಡಿಯೊ ಬಗ್ಗೆ ಗುಪ್ತಚರ ವಿಭಾಗ ಗಮನ ಹರಿಸಿದ್ದರೆ, ಸಿಆರ್‍ಪಿಎಫ್ ಸಿಬ್ಬಂದಿ ಮೇಲೆ ಪುಲ್ವಾನಾದಲ್ಲಿ ನಡೆದ ಉಗ್ರರ ದಾಳಿಯನ್ನು ತಪ್ಪಿಸಬಹುದಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ದಾಳಿಯ ಹೊಣೆ ಹೊತ್ತಿರುವ ಜೈಶ್, ಕಳೆದ ಎರಡು ದಿನಗಳ ಹಿಂದೆ ವಿಡಿಯೊ ಮೂಲಕ ಆನ್ ಲೈನ್ ನಲ್ಲಿ ಎಚ್ಚರಿಕೆ ನೀಡಿ ಸುಧಾರಿತ ಸ್ಫೋಟಕ ಸಾಧನಗಳ ಮೂಲಕ ಆತ್ಮಹತ್ಯಾ ದಾಳಿ ನಡೆಸುವ ಎಚ್ಚರಿಕೆ ನೀಡಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ  ಎನ್ ಡಿಟಿವಿ ವರದಿ ಮಾಡಿದೆ.

ಎರಡು ದಿನಗಳ ಹಿಂದೆ ಬಿಡುಗಡೆ ಮಾಡಿರುವ ಈ ವಿಡಿಯೊದಲ್ಲಿ ಅಪ್ಘಾನಿಸ್ತಾನದ ದಾಳಿಯನ್ನು ತೋರಿಸಲಾಗಿತ್ತು. ಇದು ವಾಹನದಲ್ಲಿ ಸ್ಫೋಟಕಗಳನ್ನು ಒಯ್ದು ದಾಳಿ ನಡೆಸಿದ ದೃಶ್ಯವನ್ನು ತೋರಿಸಿತ್ತು. ಈ ವಿಡಿಯೊವನ್ನು ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಅಪರಾಧ ಪತ್ತೆ ವಿಭಾಗ ಶೇರ್ ಮಾಡಿದ್ದರೂ, ಈ ಬಗ್ಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ.

ಇಷ್ಟು ಮಾತ್ರವಲ್ಲದೇ, ದಾಳಿ ನಡೆಸಿದ ಅದಿಲ್ ಅಹ್ಮದ್ ದರ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...