ಮ0ಗಳೂರು:ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

Source: s o news | By MV Bhatkal | Published on 6th July 2018, 12:21 PM | Coastal News |

ಮ0ಗಳೂರು:ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ನಡೆಸಿರುತ್ತದೆ.ಪ್ರಸ್ತುತ ದ.ಕ ಜಿಲ್ಲೆಯ  ಪದವಿಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿಯ ಅಗತ್ಯತೆಯನ್ನು ಮನಗಂಡು  ಪದವಿಪೂರ್ವ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ಶ್ರೀ ಚೈತನ್ಯ ಪ.ಪೂ ಕಾಲೇಜು ಮಂಗಳೂರು, ದ.ಕ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ದ.ಕ ಜಿಲ್ಲೆ ಪದವಿ ಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಅನುದಾನರಹಿತ  ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪಪೂ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಜುಲೈ 9 ಮತ್ತು     10 ರಂದು ಶ್ರೀ ಚೈತನ್ಯ ಪದವಿಪೂರ್ವ ಕಾಲೇಜು, ಕೊಟ್ಟಾರ ಚೌಕಿ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ವಾಣಿಜ್ಯಶಾಸ್ತ್ರ ವಿಷಯವನ್ನು ಬೋಧಿಸುವ  ಉಪನ್ಯಾಸಕರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ  ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...