ಭಾರತ್ ಬಂದ್ ಹಿನ್ನೆಲೆ; ಉಡುಪಿಯಲ್ಲಿ ಘರ್ಷಣೆ ಸೆ.೧೪೪ ಜಾರಿ

Source: sonews | By Staff Correspondent | Published on 10th September 2018, 4:53 PM | Coastal News | State News | Don't Miss |

ಉಡುಪಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸೋಮವಾರ ವಿವಿಧ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಗಳು ಸಂಭವಿಸಿದ್ದು, ಕಾರ್ಯಕರ್ತರು ಕಾನೂನು ಮೀರಿ ವರ್ತಿಸುವ ಸೂಚನೆ ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಇಂದು ಪೂರ್ವಾಹ್ನ 11ರಿಂದ ಸೆ.11ರ ಬೆಳಗ್ಗೆ 6 ಗಂಟೆಯವರೆಗೆ ಅಪರಾಧ ಸಂಹಿತೆ 1973ರ ಕಲಂ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಆದೇಶ ಹೊರಡಿಸಿದ್ದಾರೆ.

ಎರಡು ರಾಜಕೀಯ ಪಕ್ಷಗಳ ಘರ್ಷಣೆಯನ್ನು ರಾಜಕೀಯವಾಗಿ ಬಳಸಿಕೊಂಡು ಅಲ್ಲಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ದೊಂಬಿ ನಡೆಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಲಂ 144ರಂತೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ರೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಹಶೀಲ್ದಾರ್‌ರ ಆದೇಶದಲ್ಲಿ ತಿಳಿಸಲಾಗಿದೆ.

Read These Next