ಹಿಂದೂ ರಾಷ್ಟ್ರಕ್ಕಾಗಿ ದೇಶದ ಸಂವಿಧಾನ ತಿದ್ದುಪಡೆ ಅವಶ್ಯ-ವಿಜಯ ಕುಮಾರ್

Source: sonews | By Staff Correspondent | Published on 4th March 2018, 11:42 PM | Coastal News | State News | Don't Miss |

ಉಡುಪಿ: ಸಂವಿಧಾನದಲ್ಲಿ ತಿದ್ದುಪಡಿ ತಂದು 100 ಕೋಟಿ ಹಿಂದೂಗಳಿರುವ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕಾಗಿದೆ ಎಂದು ಉಡುಪಿ ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖ ವಿಜಯ ಕುಮಾರ್ ಹೇಳಿದ್ದಾರೆ.

ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ರವಿವಾರ ಉಡುಪಿಯ ಅನುಗ್ರಹ ಸಭಾಭವನದಲ್ಲಿ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಡೀ ಜಗತ್ತಿನಲ್ಲಿ ಕ್ರಿಶ್ಚಿಯನ್ನರಿಗೆ 157, ಮುಸ್ಲಿಮರಿಗೆ 52, ಬೌದ್ಧರಿಗೆ 12, ಕೆಲವೇ ಕೆಲವು ಜನಸಂಖ್ಯೆಯ ಇರುವ ಯಾಹೂದಿಗಳಿಗೂ ಒಂದು ದೇಶ ಇದೆ. ಆದರೆ 100ಕೋಟಿ ಜನಸಂಖ್ಯೆ ಇರುವ ಹಿಂದೂಗಳಿಗೆ ಪ್ರತ್ಯೇಕ ಒಂದೇ ಒಂದು ದೇಶ ಇಲ್ಲ. ನಾವು ಇರುವ ಭಾರತ ದೇಶವು ಜಾತ್ಯತೀತ ರಾಷ್ಟ್ರ. ಇಲ್ಲಿ ಹಿಂದುತ್ವದ ಬಗ್ಗೆ ಮಾತನಾಡಲಿಕ್ಕೆ ಇಲ್ಲ. ಮಾತನಾಡಿದರೆ ಕೋಮುವಾದದ ಪಟ್ಟ ಕಟ್ಟಿ ಕೇಸು ಹಾಕಲಾಗುತ್ತದೆ. ಅದಕ್ಕಾಗಿ ನಾವು ಈ ಭಾರತ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕಾಗಿದೆ ಎಂದರು.

1976ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ 42ನೆ ತಿದ್ದುಪಡಿ ತಂದು ಸಂವಿಧಾನದಲ್ಲಿ ಭಾರತ ಹಿಂದು ರಾಷ್ಟ್ರ ಎಂಬುದರ ಬದಲು ಜಾತ್ಯತೀತ ರಾಷ್ಟ್ರ ಎಂಬ ಶಬ್ದವನ್ನು ಸೇರಿಸಿದರು. ಅದರ ನಂತರ 103 ಬಾರಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ಇದೀಗ ನಾವು 104ನೆ ಬಾರಿ ಸಂವಿ ಧಾನದಲ್ಲಿ ತಿದ್ದುಪಡಿ ತಂದು ಭಾರತವನ್ನು 100 ಕೋಟಿ ಹಿಂದೂಗಳಿಗೆ ಪ್ರತ್ಯೇಕ ರಾಷ್ಟ್ರವನ್ನಾಗಿ ಮಾಡಬೇಕಾಗಿದೆ. ಸಂವಿಧಾನಾತ್ಮಕವಾಗಿ ಬೇಡಿಕೆ ಮುಂದಿಟ್ಟು ಕಾನೂನು ರೀತಿಯ ಹೋರಾಟ ಮಾಡಿದರೆ ಭಾರತ ಹಿಂದೂ ರಾಷ್ಟ್ರ ಆಗಲು ಸಾಧ್ಯವಿದೆ ಎಂದು ಅವರು ತಿಳಿಸಿದರು.

ಇಂದು ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ, ಅತ್ಯಾಚಾರ, ಅನಾಚಾರ, ಮತಾಂತರ, ಲವ್ ಜಿಹಾದ್, ದೇವಸ್ಥಾನಗಳ ಸರಕಾರೀಕರಣದ ಹೆಸರಿ ನಲ್ಲಿ ಹಣ ಲೂಟಿ, ಸಾಧು ಸಂತರ ಮೇಲೆ ಕೇಸು, ಹಿಂದುಗಳ ಮೇಲಿನ ದಬ್ಬಾಳಿಕೆ ವಿರುದ್ಧ ಶಿವಾಜಿ ಮಹಾರಾಜರ ಆದರ್ಶದೊಂದಿಗೆ ಹೋರಾಟ ಮಾಡ ಬೇಕಾಗಿದೆ. ಇಲ್ಲದಿದ್ದರೆ ನಾವು ಇಲ್ಲಿ ಬದುಕಿ ಉಳಿಯುವುದು ಕಷ್ಟವಾಗು ತ್ತದೆ ಎಂದರು.

ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಸಿ.ನಾಯ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮರಾಠ ಧ್ವನಿ ಪತ್ರಿಕೆಯ ಸಂಪಾದಕ ವಿ.ಕೆ.ಪವರ್, ನಗರಸಭೆ ಸದಸ್ಯ ದಿನಕರ ಶೆಟ್ಟಿ ಹೆರ್ಗ, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಫೆಡರೇಶನ್‌ನ ನಿರ್ದೇಶಕ ಮಂಜುನಾಥ್ ಎಸ್.ಕೆ., ತಾಪಂ ಸದಸ್ಯ ಸುಭಾಷ್ ನಾಯ್ಕಿ, ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಅಧ್ಯಕ್ಷ ಆರ್.ಸಿ. ನಾಯ್ಕಿ, ಉಡುಪಿ ಮರಾಠ ಸ್ವಾಭಿಮಾನಿ ಜಾಗೃತಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ನಾಯ್ಕಾ ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...