ಮುಸ್ಲಿಮರ ಮತಗಳು ಬೇಡವೆನ್ನುವ ಹೆಗಡೆ ಮುಸ್ಲಿಮ್ ರೌಡಿಯ ಸಂಪರ್ಕ; ವೇದಿಕೆ ಹಂಚಿಕೊಂಡ ಫೋಟೊ ವೈರಲ್

Source: sonews | By Staff Correspondent | Published on 19th March 2019, 11:32 PM | Coastal News | State News | Don't Miss |

ಕಾರವಾರ : ಮುಸ್ಲಿಮರ ಮತಗಳು ತನಗೆ ಬೇಡ ಎನ್ನುವ ಕೇಂದ್ರ ಸಚಿವ ಅನಂತ್ ಕುಮಾರ್ ಹಗಡೆ ಈಗ ಅದೇ ಮುಸ್ಲಿಮ್ ರೌಡಿಶೀಟರ್ ನೊಂದಿಗೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದು ಕಾಂಗ್ರೇಸ್ ಜೆ.ಡಿ.ಎಸ್ ಪಕ್ಷ ಸೇರಿದಂತೆ ಸ್ವತಃ ಸಂಘಪರಿವಾರದ ಕಾರ್ಯಕರ್ತ ಅಸಮಧಾನಕ್ಕೆ ಕಾರಣರಾಗಿದ್ದಾರೆ.

ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಗಡೀಪಾರು ಆದೇಶವಿರುವ ರೌಡಿ ಶೀಟರ್‌ನೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವ ಫೋಟೊ, ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು ಇದು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕರು ಸೇರಿ ದಂತೆ ಸಂಘಪರಿವಾರ, ಬಿಜೆಪಿಯ ಸ್ಥಳೀಯ ನಾಯಕರು ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ರೌಡಿಶೀಟರ್ ಹಾಗೂ ಭೂಗತ ಪಾತಕಿಗಳ ಜೊತೆ ನಂಟು ಹೊಂದಿರುವ ಆರೋಪಿ ಶಿರಸಿಯ ಫಯಾಝ್ ಎಂಬಾತನ ಜೊತೆಗೆ ಸಂಸದರು ವೇದಿಕೆ ಹಂಚಿಕೊಂಡಿರುವ, ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಭಾಗಿಯಾಗಿರುವ ಫೋಟೊ, ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಸಂಘಪರಿವಾರ ಸಹಿತ ಬಿಜೆಪಿಯ ಸ್ಥಳೀಯ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಭೂಗತ ಪಾತಕಿಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪಿ ಹಾಗೂ ಶಿರಸಿ ಠಾಣೆಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಿವಿಧ ಆರೋಪದಡಿ ರೌಡಿ ಶೀಟರ್ ಆಗಿರುವ ಫಯಾಝ್ ಎಂಬಾತನೊಂದಿಗೆ ಸಚಿವ ಹೆಗಡೆ ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ಫಯಾಝ್‌ನನ್ನು ಬಿಜೆಪಿ ಮುಸ್ಲಿಂ ಮೋರ್ಚಾದ ಪದಾಧಿಕಾರಿಯಾಗಿ ಆಯ್ಕೆ ಮಾಡಿಕೊಂಡಿರುವ ಸಂಸದರು, ಈತನನ್ನು ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ತನ್ನ ಜೊತೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಆದರೆ, ಪಕ್ಷದಲ್ಲಿ ಫಯಾಝ್‌ಗೆ ನೀಡಲಾಗಿರುವ ಸ್ಥಾನಮಾನಗಳ ಬಗ್ಗೆ ಅಧೀಕೃತ ಘೋಷಣೆಯಾಗಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಮಾರಿಕಾಂಭಾ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆ, ಜಿಜೆಪಿಯ ಹಲವು ರ್ಯಾಲಿಗಳು ಹಾಗೂ ಶಿರಸಿ ಸೇರಿದಂತೆ ಉತ್ತರ ಕನ್ನಡದಾದ್ಯಂತ ಆಯೋಜಿಸಲಾಗುತ್ತಿರುವ ನವಭಾರತ ಕಾರ್ಯಕ್ರಮಗಳಲ್ಲಿ ಸಚಿವ ಹೆಗಡೆ ಅವರು ಫಯಾಝ್ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...