ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

Source: sonews | By Staff Correspondent | Published on 22nd January 2019, 10:44 PM | Coastal News | Don't Miss |

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ಎ.ಪಿ.ಮುಜಾವರ್, ಪ್ರಧಾನ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ ಹಾಗೂ ಕಾರ್ಯದರ್ಶಿ ಸಾರ್ವಜನಿಕ ಸಂಪರ್ಕ ಎಂ.ಆರ್.ಮಾನ್ವಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಸಿದ್ಧಗಂಗಾ ಶ್ರೀಗಳು ದೇಶದ ಒಂದು ಶಕ್ತಿಯಾಗಿ ಬದುಕಿದರು, ಅವರ ನಿಸ್ವಾರ್ಥ ಮನುಷ್ಯಪ್ರೇಮ, ಎಲ್ಲ ಜಾತಿ ಧರ್ಮದವರಿಗೆ ಅವರು ನೀಡಿದ ಶಿಕ್ಷಣ ಅವರು ಓರ್ವ ವ್ಯಕ್ತಿಯಾಗದೆ ದೇಶದ ಶಕ್ತಿಯಾಗಿದ್ದರು ಎನ್ನುವುದನ್ನು ಸಾಬೀತು ಮಾಡಿ ತೋರಿಸಿದೆ. ತಮ್ಮ ಇಡೀ ಬದುಕೆ ಸಮಾಜಕ್ಕೆ ಮೀಸಲಿಟ್ಟು ಧಾರ್ಮಿಕ ಸೌಹಾರ್ದತೆಯನ್ನು ಮೆರೆದರು. 

ಸಮಾಜವನ್ನು ಜನರ ಒಂದು ಗುಂಪಾಗಿ ಅವರು ನೋಡಿರುವರೇ ಹೊರತು ಹಿಂದೂ ಮುಸ್ಲಿಂ ಆಗಿ ಅಲ್ಲ. ಈ ಗುಣವೇ ಅವರನ್ನು ಅನನ್ಯಗೊಳಿಸಿದೆ.ಅವರ ನಿಧನವು ಈ ಸಮಾಜಕ್ಕೆ ಬಹುದೊಡ್ಡ ನಷ್ಟ. ಅವರು ಪ್ರತಿಪಾದಿಸಿದ ಸೌಹಾರ್ದ ಸಮಾಜ ಕಾರ್ಯರೂಪಕ್ಕೆ ಬರಲಿ ಮತ್ತು ಅವರ ಪರಿವಾರ, ಅಭಿಮಾನಿ ವರ್ಗಕ್ಕೆ ಅವರ ಅನುಪಸ್ಥಿತಿಯನ್ನು ಸಹಿಸುವ ಸಾಮಥ್ರ್ಯವನ್ನು ದೇವನು  ದಯಪಾಲಿಸಲಿ ಪ್ರಾರ್ಥಿಸಿರುವ ಸಂಸ್ಥೆಯ ಮುಖಂಡರು, ಅವರೊಂದು ಸರ್ಕಾರದಂತೆ ಕಾರ್ಯನಿರ್ವಹಿಸಿದರು. ಅನ್ನದಾನ ಮತ್ತು ವಿದ್ಯಾದಾನದ ಮೂಲಕ ಲಕ್ಷಾಂತರ ಮಂದಿ ಹೊಟ್ಟೆಯ ಹಸಿವು ಮತ್ತು ಮೆದುಳಿನ ಹಸಿವನ್ನು ತಣಿಸಿದರು. ಆದ್ದರಿಂದ ಭಾರತ ಸರಕಾರವು ಅವರಿಗೆ  ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಪತ್ರಿಕಾಪ್ರಕಟಣೆಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 
 
Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...