ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಣಿ; (ಇತರ ಸಂಕ್ಷಿಪ್ತ ಸುದ್ದಿಗಳು)

Source: sonews | By sub editor | Published on 8th August 2018, 11:56 PM | Coastal News | Don't Miss |

ಕಾರವಾರ: ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 2018 ನೇ ಮಾಹೆಯಲ್ಲ್ಲಿ 160 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ.
          
ಕಳೆದ ತಿಂಗಳು 158 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿ 9487 ಅಭ್ಯರ್ಥಿಗಳು ಇದ್ದಾರೆ. ಅವರಲ್ಲಿ 3079 ಮಹಿಳಾ ಅಭ್ಯರ್ಥಿಗಳು ಇದ್ದು, 1832 ಪರಿಶಿಷ್ಟ ಜಾತಿ, 776 ಪರಿಶಿಷ್ಟ ವರ್ಗ, 983 ಅಂಗವಿಕಲ ಅಭ್ಯರ್ಥಿಗಳು ಇದ್ದಾರೆ ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಜಮಾ ಬಂಧಿ ಕಾರ್ಯಕ್ರಮ
ಕಾರವಾರ:   ಪ್ರಸಕ್ತ ಸಾಲಿನ ಭಟ್ಕಳ ತಾಲ್ಲೂಕಿನ ಗ್ರಾಮ ಪಂಚಾಯತಗಳ ಜಮಾ ಬಂಧಿ ಕಾರ್ಯಕ್ರಮವನ್ನು ಅಗಷ್ಟ 16 ರಿಂದ ಸಪ್ಟೆಂಬರ್ 20 ರವರೆಗೆ ನಡೆಯಲಿದೆ. 
          
ಅಗಷ್ಟ 16 ರಂದು ಬೈಲೂರು, ಅ. 18 ಹಾಡವಳ್ಳಿ, ಅ. 20 ಮಾವಳ್ಳಿ 1, ಅ. 23 ಮಾವಳ್ಳಿ-2(ಮುರ್ಡೇಶ್ವರ), ಅ. 24 ಯಲ್ವಡಿಕವೂರ, ಅ. 28 ಕೈಕಿಣಿ, ಅ. 30 ಮಾರುಕೇರಿ, ಅ. 31 ಶಿರಾಲಿ, ಸಪ್ಟೆಂಬರ 4 ಹೆಬಳೆ, ಸೆ. 6 ಬೆಳಕೆ, ಸೆ. 7 ಮಾವಿನಕುರ್ವೆ, ಸೆ. 10 ಕೊಪ್ಪ, ಸೆ. 11 ಕೋಣಾರ, ಸೆ. 18 ಮುಂಡಳ್ಳಿ, ಸೆ. 19 ಬೆಂಗ್ರೆ, ಸೆ. 20 ಮುಟ್ಟಳ್ಳಿ ಗ್ರಾಮ ಪಂಚಾಯತ ಕಾರ್ಯಾಲಯಗಳಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಸಲಾಗುವುದು ಎಂದು ಭಟ್ಕಳ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

                                       ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿಗೆ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಜನಾಂಗದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
          
ನರ್ಸಿಂಗ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಗಷ್ಟ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂ : 08382-220336 ನ್ನು ಸಂಪರ್ಕಿಸಬಹುದು. ಅಥವಾ ಇ ಮೇಲ್ :  ಜomuಣಣಚಿಡಿಚಿಞಚಿಟಿಟಿಚಿಜಚಿ@gmಚಿiಟ.ಛಿom  ನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ರವರು ತಿಳಿಸಿದ್ದಾರೆ.


ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ
ಕಾರವಾರ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಹಾಗೂ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500/- ಶೈಕಣಿಕ ಅವಧಿ 10 ತಿಂಗಳಿಗೆ ಒಟ್ಟು ರೂ. 15000/- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗವುದು 
          
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು,. ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ ದೂರದವರಾಗಿರಬೇಕು.  ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ/ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾಸಿರಿಯಡಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾತಿ ನೀಡಲಾಗುವುದು. ಅಲ್ಪಸಂಖ್ಯಾತರ ಎಲ್ಲಾ ವಿದ್ಯಾರ್ಥಿನಿಲಯಗಳು ಭರ್ತಿ ಆದ ನಂತರ ಅರ್ಜಿಗಳನ್ನು ವಿದ್ಯಾಸಿರಿ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುವುದು. ಮುಕ್ತ ವಿಶ್ವವಿದ್ಯಾಲಯ. ದೂರ ಶಿಕ್ಷಣ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.           
                          
ಅರ್ಜಿ ಸಲ್ಲಿಸಲು ಅಗಷ್ಟ 31 ಕೊನೆಯ ದಿನವಾಗಿದೆ. ಅರ್ಜಿಗಾಗಿ ವೆಬ್‍ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/uಣಣಚಿಡಿಚಿಞಚಿಟಿಟಿಚಿಜಚಿ  ಗೆ ಭೇಟಿ ನೀಡಿ ಎಲ್ಲಾ ದಾಖಲೆಯೊಂದಿಗೆ ಕಾಲೇಜಿನ ಮುಖಾಂತರ ಸಲ್ಲಿಸುವಂತೆ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ರವರು ತಿಳಿಸಿದ್ದಾರೆ.


ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:   ಪ್ರಸಕ್ತ ಸಾಲಿನ ಅಲ್ಪ ಸಂಖ್ಯಾತರ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್À್ಸ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
          
ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಯ ಪಾಲಕರ ವಾರ್ಷಿಕ ಆದಾಯ ಕ್ರಮವಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ರೂ. 1 ಲಕ್ಷ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ರೂ. 2 ಲಕ್ಷ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ ರೂ. 2.50 ಲಕ್ಷ ಒಳಗಿರಬೇಕು. ಮತ್ತು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ. 50 ಕ್ಕಿಂತ ಹೆಚ್ಚಿನ ಅಂಕ ಗಳಿಸಿರಬೇಕು. 
     
ಅರ್ಜಿ ಸಲ್ಲಿಸಲು ಸಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂ: 08382-220336ನ್ನು ಸಂಪರ್ಕಿಸಬಹುದು. ಅಥವಾ ಇ-ಮೇಲ್ :  ಜomuಣಣಚಿಡಿಚಿಞಚಿಟಿಟಿಚಿಜಚಿ@gmಚಿiಟ.ಛಿom  ನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ರವರು ತಿಳಿಸಿದ್ದಾರೆ.

                                           
 

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...