ವೈದ್ಯಕೀಯ ನೆಲೆ, 24ನೇ ವಾರದಲ್ಲಿ ಗರ್ಭಪಾತಕ್ಕೆ ಸುಪ್ರೀಂ ಅಸ್ತು

Source: S O News | By MV Bhatkal | Published on 16th January 2017, 8:26 PM | National News | Don't Miss |

ನವದೆಹಲಿ: ವೈದ್ಯಕೀಯ ನೆಲೆಯಲ್ಲಿ ಮಹಾರಾಷ್ಟ್ರದ ಮಹಿಳೆಯೊಬ್ಬರಿಗೆ 24ನೇ ವಾರದಲ್ಲಿ (6ನೇ ತಿಂಗಳು) ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿತು.

22ರ ಹರೆಯದ ಮಹಿಳೆಯ ಗರ್ಭದಲ್ಲಿ ಬೆಳೆದಿದ್ದ 24 ವಾರಗಳ ಭ್ರೂಣದಲ್ಲಿ ತಲೆಬುರುಡೆ ಇಲ್ಲದೇ ಇದ್ದುದು ವೈದ್ಯಕೀಯ ತಪಾಸಣೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಮಹಿಳೆಯ ಜೀವ ರಕ್ಷಣೆ ಸಲುವಾಗಿ ಗರ್ಭಪಾತ ಮಾಡಿಸಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತು.

ಭ್ರೂಣ ಸಮರ್ಪಕವಾಗಿ ಬೆಳೆಯದೇ ಇದ್ದ ಕಾರಣ ಗರ್ಭಪಾತಕ್ಕೆ ಅವಕಾಶ ನೀಡಬಹುದು ಎಂಬುದಾಗಿ ವೈದ್ಯಕೀಯ ಮಂಡಳಿಯ ತಜ್ಞರು ಶಿಫಾರಸು ಮಾಡಿದ್ದರು. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಪರೇಲ್​ನ ಕೆಇಎಂ ಆಸ್ಪತ್ರೆಗೆ ಸುಪ್ರೀಂಕೋರ್ಟ್ ಆಜ್ಞಾಪಿಸಿತ್ತು. ವೈದ್ಯಕೀಯ ತಪಾಸಣೆ ಕಾಲದಲ್ಲಿ 21 ವಾರ ಬೆಳೆದಿದ್ದ ಭ್ರೂಣ ಸಮರ್ಪಕವಾಗಿ ಬೆಳೆದಿಲ್ಲ ಎಂಬುದು ಬೆಳಕಿಗೆ ಬಂದಿತ್ತು. 1971ರ ವೈದ್ಯಕೀಯ ಗರ್ಭಪಾತ ಕಾಯ್ದೆಯ ಪ್ರಕಾರ 20 ವಾರಗಳಿಗಿಂತ ಹೆಚ್ಚು ಕಾಲ ಭ್ರೂಣ ಬೆಳೆದಿದ್ದರೆ ಗರ್ಭಪಾತಕ್ಕೆ ಅವಕಾಶ ಇಲ್ಲ. ಗರ್ಭಪಾತಕ್ಕೆ ಅವಕಾಶ ಕೋರಿ ಕಳೆದ 3 ವರ್ಷಗಳಲ್ಲಿ ಸುಪ್ರೀಂಕೋರ್ಟ್ ಮುಂದೆ ಬಂದಿದ್ದ ಈ ಮಾದರಿಯ 4ನೇ ಪ್ರಕರಣ ಇದು.

-ಏಜೆನ್ಸೀಸ್.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...