ಭ್ರಷ್ಟಚಾರ ನಿಗ್ರಹ ದಳದಿಂದ ವಿಚಕ್ಷಣಾ ಜಾಗೃತಿ ಸಪ್ತಾಹ

Source: sonews | By Staff Correspondent | Published on 3rd November 2018, 6:15 PM | Coastal News | Don't Miss |

ಭಟ್ಕಳ: ಭ್ರಷ್ಟಚಾರ ನಿಗ್ರಹ ದಳ ಕಾರವಾರ ವತಿಯಿಂದ ಭಟ್ಕಳದ ವಿವಿಧ ಶಾಲಾ-ಕಾಲೇಜು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಚಕ್ಷಣಾ ಜಾಗೃತಿ ಸಪ್ತಾಹ-2018 ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಜಾಥಾವನ್ನು ಆಯೋಜಿಸಲಾಗಿತ್ತು. 

ನಗರದ ನ್ಯೂ ಇಂಗ್ಲಿಷ್ ಶಾಲಾ ಮೈದಾನದಿಂದ ಆರಂಭಗೊಂಡ ಮಕ್ಕಳ ಜಾಥಾ ಶಮ್ಸುದ್ದೀನ್ ವೃತ್ತದ ಮೂಲಕ ನ್ಯೂಇಂಗ್ಲಿಷ್ ಸಭಾಂಗಣಕ್ಕೆ ಮುಕ್ತಾಯಗೊಂಡಿತು. ನಂತರ ನಡದ ಸಭಾ ಕಾರ್ಯಕ್ರಮವನ್ನು  ಉದ್ದೇಶಿಸಿ ಮಾತನಾಡಿದ ಭ್ರಷ್ಟಾಚಾರ ನಿಗ್ರಹ ದಳ ಕಾರವಾರದ ಡಿ.ವೈಎಸ್ಪಿ ಗಿರೀಶ್ ಎನ್.ವೈ  ಭ್ರಷ್ಟಾಚಾರ ತೊಲಗಿಸಿ ನವಭಾರತ ಕಟ್ಟೋಣ ಎಂಬ ದ್ಯೇಯವಾಕ್ಯದೊಂದಿಗೆ ಈ ವರ್ಷ ಜಾಗೃತಿ ಸಪ್ತಾಹವನ್ನು ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳು ತಮ್ಮಲ್ಲಿ ಭ್ರಷ್ಟಾಚಾರ ನಿರ್ಮೂಲನ ಮಾಡುವ ಕುರಿತಂತೆ ಈಗಿಂದಲೆ ಜಾಗೃತಿಯನ್ನುಂಟು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. 

ಈ ಸಂದರ್ಭದಲ್ಲಿ ನ್ಯೂ ಇಂಗ್ಲಿಷ್ ಪಿಯು ಕಾಲೇಜ್ ಪ್ರಾಂಶುಪಾಲ ವೀರೇಂದ್ರ ಶಾನುಭಾಗ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ, ಎಸಿಬಿ ಪಿಎಸ್‍ಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...