ಚುನಾವಣಾ ವೆಚ್ಚ ವೀಕ್ಷಕರಿಂದ ಚೆಕ್ ಪೋಸ್ಟ್‍ಗಳ ಭೇಟಿ

Source: so news | By MV Bhatkal | Published on 19th March 2019, 11:44 PM | State News | Don't Miss |

ಹಾಸನ: ಲೋಕಸಭಾ ಚುನಾವಣೆಯ ವೆಚ್ಚ ವೀಕ್ಷಕರು ಈಗಾಗಲೇ ಆಗಮಿಸಿದ್ದು, ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತಾ ಜಿಲ್ಲೆಯಲ್ಲಿ ಮಾಡಲಾಗಿರುವ ಸಿದ್ದತೆಗಳನ್ನು ಪರಿಶೀಲಿಸುತ್ತಿದ್ದಾರೆ.
ಅವರು ಇಂದು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್‍ಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ತಪಾಸಣೆಗಳ ವ್ಯವಸ್ಥೆಯನ್ನು ಗಮನಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್ ಪ್ರಕಾಶ್‍ಗೌಡ ಅವರು ವೀಕ್ಷಕರೊಂದಿಗೆ ಹಾಜರಿದ್ದು ಲೋಕಸಭಾ ಚುನಾವಣೆಗೆ ಮಾಡಿಕೊಂಡಿರುವ ಸಿದ್ದತೆಗಳು, ಚೆಕ್‍ಪೋಸ್ಟ್‍ಗಳ ಬಗ್ಗೆ ವಿವರಿಸಿದರು. 
ಮಾಧ್ಯಮ ಮೇಲ್ವಿಚಾರಣೆ ಘಟಕಕ್ಕೆ ವೆಚ್ಚ ವೀಕ್ಷಕರ ಭೇಟಿ:ಲೋಕಸಭಾ ಚುನಾವಣೆ ವೆಚ್ಚ ವೀಕ್ಷಕರಾದ ರಾಜೀವ್ ಮಗೊ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ತೆರೆಯಲಾಗಿರುವ ಮಾಧ್ಯಮ ಮೇಲ್ವಿಚಾರಣೆ ಘಟಕಕ್ಕೆ ಭೇಟಿ ನೀಡಿ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳ ಮೇಲ್ವಿಚಾರಣೆಗೆ ಮಾಡಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಅವರು ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳ ಕುರಿತು ವಿವರಿಸಿದರು. 
ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‍ಗೌಡ, ತಹಶೀಲ್ದಾರ್ ಶ್ರೀನಿವಾಸಯ್ಯ, ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಹಾಜರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...