ಪ್ರಜಾ ಪ್ರಭುತ್ವದ ಬಲವರ್ಧನೆಗೆ ಮತದಾನ ಮಾಡಿ: ಕೆ.ಜ್ಯೋತಿ

Source: so news | By MV Bhatkal | Published on 17th March 2019, 11:08 PM | State News | Don't Miss |

ಮೈಸೂರು:ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಮತದಾನ ಮಾಡುವವರ ಸಂಖ್ಯೆ ಇಂದಿನ ದಿನಗಳ ಕಡಿಮೆಯಾಗುತ್ತಿದೆ. ಸಮಾಜದ ಹಾಗೂ ಪ್ರಜಾ ಪ್ರಭುತ್ವದ ಬಲವರ್ಧನೆಗೆ ತಪ್ಪದೇ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಜ್ಯೋತಿ ಅವರು ತಿಳಿಸಿದರು.
ನತಂತರ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ನಗರದ ಪುರಭವನ ಮಂಭಾಗ ದಿಗ್ವಿಜಯ ಹಾಗೂ ವಿಜಯವಾಣಿ ಮಾಧ್ಯಮ ಸಂಸ್ಥೆಯು ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಹಾಗೂ ಮತದಾನ ಬಗ್ಗೆ ಅರಿವು ಮೂಡಿಸಲು ಆಯೋಜಿಸಿದ್ದ ಬೈಕ್ ರ್ಯಾಲಿ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.
ಏಪ್ರಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದ ಜನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಸರ್ಕಾರ ರಚನೆಯಾಗಲು ಮುಂದಾಗಬೇಕು.
ನೈತಿಕತೆಯಿಂದ ಪ್ರಾಮಾಣಿಕವಾಗಿ ಬದ್ಧತೆಯಿಂದ ಮತದಾನ ಮಾಡುವಂತೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್ ಅವರು ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಅವರು ಮಾತನಾಡಿ 1950 ಉಚಿತ ಸಹಾಯವಾಣಿಗೆ ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಗುರುತಿನ ಚೀಟಿ ಹಾಗೂ ನೋಂದಣಿಯ ಕಡೆಯ ದಿನದ ಬಗ್ಗೆ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಸಿವಿಜûಲ್ ಎಂಬ ಚುನಾವಣಾ ಆಪ್ಯ್‍ನ್ನು ಸಿದ್ಧಪಡಿಸಿದೆ. ಸಾರ್ವಜನಿಕರು ಇದನ್ನು ಡೌನ್‍ಲೋಡ್ ಮಾಡಿಕೊಂಡು ಚುನಾವಣೆಯ ನೀತಿಸಂಹಿತೆ ಉಲ್ಲಂಘನೆಯು ಕಂಡು ಬಂದರೆ ಅದರ ಪೋಟೋಗಳನ್ನು ತೆಗೆದು ಆ್ಯಪ್‍ನಲ್ಲಿ ಹಾಕಿದರೆ ತಕ್ಷಣ ಆ ಬಗ್ಗೆ ಕ್ರಮವಹಿಸಲಾಗುವುದು ಎಂದರು.
ಈಗಾಗಲೇ ನಗರ ಪ್ರದೇಶದಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ಬೆಂಚು, ವೀಲ್ ಛೇರ್, ವಿದ್ಯುತ್ ಸಂಪರ್ಕ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ದಿಗ್ವಿಜಯ ಮತ್ತು ವಿಜಯವಾಣಿ ಸ್ಥಾನಿಕರಾದ ಸಂಪಾದಕ ಸಿ.ಕೆ.ಮಹೇಂದ್ರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಾಜು.ಆರ್, ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳಾ ಪಾಟೀಲ್, ಜಿಲ್ಲಾ ಸ್ವೀಪ್ ಕಾರ್ಯದರ್ಶಿ ಕೃಷ್ಣ, ಹಾಗೂ ಸಹಾಯಕ ಸಾಂಖ್ಯಿಕ ಅಧಿಕಾರಿ ಪ್ರವೀಣ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...