‘ಮತದಾರರ ವಿಶೇಷ ನೋಂದಣಿ ಆಂದೋಲನಾ ಜಾಥಾ’ 

Source: sonews | By Staff Correspondent | Published on 23rd November 2018, 11:01 PM | Coastal News | Don't Miss |

ಭಟ್ಕಳ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಇಲ್ಲಿನ ತಾಲೂಕಾಡಳಿತದ ವತಿಯಿಂದ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅರ್ಹತಾ ಸಂಬಂಧಿಸಿದಂತೆ ಮೂರು ದಿನಗಳ ಆಂದೋಲನ ಹಮ್ಮಿಕೊಂಡಿದ್ದು ಶುಕ್ರವಾರದಂದು ದಿ ನ್ಯೂ ಇಂಗ್ಲೀಷ್ ಸ್ಕೂಲ್ ಶಾಲೆ ವಿದ್ಯಾರ್ಥಿಗಳಿಂದ ಮತದಾರರ ವಿಶೇಷ ನೋಂದಣಿ ಆಂದೋಲನಾ ಮೆರವಣಿಗೆ ಜಾಥಾವೂ ನಡೆಯಿತು.

1-1-2019ರ ಅರ್ಹತಾ ದಿನಾಂಕ ಆಧರಿಸಿ ಮತದಾರರ ಪಟ್ಟಿಗಳ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಶೇಷ ನೋಂದಣಿ ಆಂದೋಲನ ನಡೆಸಲಾಯಿತು. ಸಾರ್ವಜನಿಕರು ನಮೂನೆ-6, 7, 8 ಹಾಗೂ 8ಎ ಅರ್ಜಿಗಳನ್ನು ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳ ಬಳಿ ನೀಡಲಾಗುವದು ಈ ಬಗ್ಗೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಮತದಾರರ ನೋಂದಣಿ, ತಿದ್ದುಪಡಿ, ವರ್ಗಾವಣೆಯ ಕಾರ್ಯವನ್ನು ಮಾಡಿಕೊಳ್ಳಬಹುದಾಗಿದೆ ಎಂದು ಪ್ರಭಾರೆ ತಹಸೀಲ್ದಾರ ಬಿನಯ ಪಿಕೆ ಮಾಧ್ಯಮಕ್ಕೆ ತಿಳಿಸಿದರು. ಈ ಸಂಧರ್ಬದಲ್ಲಿ ಜಾಥಾವೂ ದಿ ನ್ಯು ಇಂಗ್ಲಿಷ್ ಸ್ಕೂಲ್‍ನಿಂದ ಆರಂಭವಾಗಿ ಸಂಶುದ್ದೀನ ಸರ್ಕಲ ಮಾರ್ಗವಾಗಿ ತೆರಳಿ ಪುನಃ ಬಂದು ಶಾಲೆಯ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸೇರಿ ಮತದಾರ ನೊಂದಣಿ ಬಗೆಗಿನ ಭಿತ್ತಿಪತ್ರವನ್ನು ಪ್ರದರ್ಶಿಸುತ್ತಾ ಸಾರ್ವಜನಿಕರನ್ನು ಗಮನ ಸೆಳೆದರು. 

ಈ ಸಂಧರ್ಭದಲ್ಲಿ ಪ್ರಭಾರೆ ತಾಲೂಕಾ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ಕ್ಷೇತ್ರ ಶಿಕ್ಷಣ ಸಂಪನ್ಮೂಲಧಿಕಾರಿ ಯಲ್ಲಮ್ಮ, ಸಹಾಯಕ ಆಯುಕ್ತರ ಕಛೇರಿ ಶಿರಸೇದ್ದಾರ ಎಲ್.ಎ.ಭಟ್, ತಹಸೀಲ್ದಾರ ಕಛೇರಿ ಸಿಬ್ಬಂದಿ ಕಾರ್ತಿಕ, ದಿ ನ್ಯೂ ಇಂಗ್ಲೀಷ್ ಸ್ಕೂಲ್ ಮುಖ್ಯಾಧ್ಯಾಪಕ ಎಮ್.ಕೆ.ನಾಯ್ಕ, ಶಿಕ್ಷಕ ಗಣಪತಿ ಶೀರೂರು ಹಾಗೂ ಮುಂತಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...