ನಂಜನಗೂಡು ಜಾತ್ರೆಯಲ್ಲಿ ಮತದಾನ ಜಾಗೃತಿ

Source: so news | By MV Bhatkal | Published on 19th March 2019, 11:55 PM | State News | Don't Miss |

 

ಮೈಸೂರು: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಜಾತ್ರ ಮಹೋತ್ಸವಕ್ಕೆ ರಾಜ್ಯದ ವಿವಿಧ ಮೂಲಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಹಾಗೂ ನಾಗರೀಕರಿಗೆ ಮಂಗಳವಾರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಂಡು ತಮ್ಮ ಅತ್ಯಮೂಲ್ಯವಾದ ಮತದಾನ ಹಕ್ಕನ್ನು ಚಲಾಯಿಸಬೇಕು. ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮತದಾನವು ಬ್ರಹ್ಮಾಸ್ತ್ರವಾಗಿದೆ ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜೇ ಅರಸ್ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳು, ಜನಪರ ಕಾಳಜಿ ಹಾಗೂ ದೇಶದ ಅಭಿವೃದ್ಧಿಯ ಮಾನದಂಡ ಇಟ್ಟುಕೊಂಡು ಉತ್ತಮ ಆಡಳಿತ ನಡೆಸುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶ ನಿಮ್ಮ ಕೈಯಲ್ಲಿದೆ ಚುನಾವಣೆಯ ದಿನ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಿ ನಿಮ್ಮ ಕರ್ತವ್ಯವನ್ನು ಪೊರೈಸಿ ಎಂದರು.
ನಾಗರೀಕರು ಹಣ, ಹೆಂಡ ಹಾಗೂ ಇನ್ನಿತರ ಆಮಿಷಗಳಿಗೆ ಒಳಗಾಗದೆ ಪ್ರಜಾಪ್ರಭುತ್ವದ ಬಲಪಡಿಸಿ, ದೇಶ ಪ್ರಜೆಗಳಿಗೋಸ್ಕರ ಪಾರದರ್ಶಕ ಆಡಳಿತ ನಡೆಸುವ ನಾಯಕರನ್ನು ಆಯ್ಕೆ ಮಾಡಲು ಮುಂದಾಗುವಂತೆ ಮತದಾರರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೆಶಕರಾದ ಶ್ರೀನಿವಾಸ್ , ಕಛೇರಿ ವ್ಯವಸ್ಥಾಪಕ ನಂಜುಡಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...