ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಮೂಲಕ ತಾಲ್ಲೂಕಿನ ವಿವಿದೆಡೆ ಮತದಾನ ಜಾಗೃತಿ

Source: so news | By MV Bhatkal | Published on 19th March 2019, 11:49 PM | State News | Don't Miss |

 

ಮೈಸೂರು: ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕಿನ ವಿವಿಧ ಕಡೆ ವಿದ್ಯುನ್ಮಾನ ಮತಯಂತ್ರಗಳಾದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ನೀಡುವ ಮೂಲಕ ಮತದಾರರಿಗೆ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು ಎಂದು ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಕೃಷ್ಣ ಅವರು ತಿಳಿಸಿದರು.
ಸೋಮವಾರ ಮೈಸೂರು ತಾಲ್ಲೂಕಿನ ಕಡಕೊಳ ಮತ್ತು ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯತಿ ಹಾಗೂ ಮಾಣಿಕ್ಯಪುರ, ಶೆಟ್ಟನಾಯಕನಹಳ್ಳಿ, ವರಕೋಡು, ಕಟ್ಟೆಹುಂಡಿ, ಮಾರ್ಬಹಳ್ಳಿ ಹುಂಡಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ನೀಡಿ 2019ರ ಏಪ್ರಿಲ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನದ ಮಾಡುವಂತೆ ನಾಗರೀಕರಿಗೆ ಅರಿವು ಮೂಡಿಸಲಾಯಿತು ಎಂದರು.
ಸೆಕ್ಟರ್ 14ರ ವ್ಯಾಪ್ತಿಯ ಬೋಗಾದಿ ಮರಿಯಾನಿಕೇತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 150 ಮತ್ತು 151ರಲ್ಲಿ ಮತದಾರರಿಗೆ ಅಣಕು ಮತದಾನ ಮಾಡಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನದ ಮಾಡುವ ಬಗ್ಗೆ ನಾಗರೀಕ ಮತದಾರ ಪ್ರಭುಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಮೇಲಿನ ಎಲ್ಲಾ ಗ್ರಾಮದಲ್ಲಿಯೂ ಮತದಾರರಿಗೆ ಚುನವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಮಾರಾಟಕ್ಕಿಡದೆ ಪ್ರಜಾಪ್ರಭುತ್ವದ ಆಶಗಳನ್ನು ಕಾಪಾಡುವ ಪ್ರಮಾಣಿಕ ವ್ಯಕ್ತಿಗಳನ್ನು ಆಯ್ಕೆ ಮಾಡಲು ತಪ್ಪದೇ ಮತದಾನ ಮಾಡಬೇಕು ಎಂದು ಅವರು ಹೇಳಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...