ಮಹಿಳಾ ಸಬಲೀಕರಣಕ್ಕಾಗಿ 1100 ಕೋಟಿ ರೂ.

Source: sonews | By Staff Correspondent | Published on 8th March 2018, 12:23 AM | Global News | Don't Miss |

ವಾಶಿಂಗ್ಟನ್: ಮಹಿಳಾ ದಿನಾಚರಣೆಯ ಮುನ್ನಾ ದಿನದಂದು, ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ಭಾರತ ಸೇರಿದಂತೆ 4 ದೇಶಗಳಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಬಲಪಡಿಸುವ ಉದ್ದೇಶದ 170 ಮಿಲಿಯ ಡಾಲರ್ (ಸುಮಾರು 1103 ಕೋಟಿ ರೂಪಾಯಿ) ವೆಚ್ಚದ ಯೋಜನೆಯೊಂದನ್ನು ಘೋಷಿಸಿದೆ.

ಭಾರತ, ಕೆನ್ಯ, ತಂಝಾನಿಯ ಮತ್ತು ಉಗಾಂಡಗಳಲ್ಲಿ ಜಾರಿಗೆ ಬರಲಿರುವ ಈ ಯೋಜನೆಯು ನಾಲ್ಕು ಅಂಶಗಳಿಗೆ ಆದ್ಯತೆ ನೀಡಲಿದೆ. ಅವುಗಳೆಂದರೆ ಲಿಂಗ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುವುದು, ಡಿಜಿಟಲ್ ಆರ್ಥಿಕ ವ್ಯವಸ್ಥೆಯಲ್ಲಿ ಸರ್ವರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡುವುದು, ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಮತ್ತು ಕೃಷಿ ಕ್ಷೇತ್ರ ಮತ್ತು ಮಹಿಳಾ ಬೆಂಬಲ ಗುಂಪುಗಳಿಗೆ ಬೆಂಬಲ ನೀಡುವುದು.

‘‘ತನ್ನ ಮತ್ತು ತನ್ನ ಕುಟುಂಬದ ಬದುಕನ್ನು ಉತ್ತಮಪಡಿಸಲು ಮಹಿಳೆಯೊಬ್ಬರು ಮಾಡಬಹುದಾದ ಅತ್ಯುತ್ತಮ ವಿಧಾನಗಳ ಪೈಕಿ ಒಂದು ತನ್ನ ಆರ್ಥಿಕ ಭವಿಷ್ಯವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಾಗಿದೆ’’ ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ ಅಧ್ಯಕ್ಷೆ ಮೆಲಿಂಡಾ ಗೇಟ್ಸ್ ಹೇಳಿದ್ದಾರೆ.

 

Read These Next

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...