ಗುಜರಾತ್: ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ, 18 ಮಂದಿ ಸಾವು

Source: Reuters | Published on 2nd May 2021, 12:06 PM | National News |

ಅಹಮದಾಬಾದ್: ಗುಜರಾತಿನ ಭರೂಚ್ ನಗರದ ಪಟೇಲ್ ವೆಲ್‌ಫೇರ್ ಆಸ್ಪತ್ರೆಯ ಕೋವಿಡ್‌–19 ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶುಕ್ರವಾರ ತಡರಾತ್ರಿ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಐಸಿಯುನಲ್ಲಿ ಶುಕ್ರವಾರ ಮಧ್ಯರಾತ್ರಿಯ ಹೊತ್ತಿಗೆ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ’ ಎಂದು ಭರೂಚ್‌ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿ. ಚುಡಾಸಮಾ ಅವರು ಮಾಹಿತಿ ನೀಡಿದ್ದಾರೆ.

‘ಬೆಂಕಿಯು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದ್ದರಿಂದ ಸಾಕಷ್ಟು ಅವ್ಯವಸ್ಥೆ ಉಂಟಾಯಿತು. ಆಸ್ಪತ್ರೆಯ ಸಿಬ್ಬಂದಿ ನನ್ನ ಕುಟುಂಬದ ಸದಸ್ಯರನ್ನು ವಾರ್ಡಿನಿಂದ ಹೊರಗೆ ಕರೆದೊಯ್ದರು. ಬಳಿಕ ಅವರನ್ನು ನಾವು ಬೇರೆ ಆಸ್ಪತ್ರೆಗೆ ದಾಖಲಿಸಿದೆವು. ಘಟನೆಯಲ್ಲಿ ಕೋವಿಡ್ ಪೀಡಿತರಾಗಿದ್ದ ನನ್ನ ಇಬ್ಬರು ಸಂಬಂಧಿಕರು ಪಾರಾಗಿದ್ದಾರೆ’ ಎಂದು ಪಾರ್ಥ್ ಗಾಂಧಿ ಎನ್ನುವವರು ತಿಳಿಸಿದರು.

‘ಭರೂಚ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣಹಾನಿಯಾಗಿರುವುದು ನೋವಿನ ಸಂಗತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...