ತೌತೆ ಚಂಡಮಾರುತ: ಮಹಾರಾಷ್ಟ್ರ, ಗುಜರಾತ್‌ ತತ್ತರ, 33 ಸಾವು

Source: ಪಿಟಿಐ/ಎಎಫ್‌ಪಿ | Published on 19th May 2021, 11:50 AM | National News |

ಮುಂಬೈ/ಅಹಮದಾಬಾದ್‌: ತೌತೆ ಚಂಡಮಾರುತವು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಎರಡೂ ರಾಜ್ಯಗಳಲ್ಲಿ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ. 90ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.  

ಮಂಗಳವಾರ, ಮಹಾರಾಷ್ಟ್ರ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮ ಗಾಳಿಗೆ ಎದ್ದ ಸಮುದ್ರದ ದೈತ್ಯ ಅಲೆಗಳು ಗೇಟ್‌ವೇ ಆಫ್ ಇಂಡಿಯಾ, ಚೌಪಾಟಿ ಮತ್ತು ಮೆರಿನ್‌ ಡ್ರೈವ್ ಪ್ರದೇಶದಲ್ಲಿ ಟನ್‌ಗಟ್ಟಲೆ ಕಸವನ್ನು ತಂದುಹಾಕಿವೆ. ಇದರ ವಿಡಿಯೊಗಳು ವೈರಲ್ ಆಗಿವೆ. ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ.

ಗೇಟ್‌ವೇ ಆಫ್‌ ಇಂಡಿಯಾ ಬಳಿ ಸಮುದ್ರಕ್ಕೆ ಮುಖಮಾಡಿರುವ ಸುರಕ್ಷತಾ ಗೋಡೆ ಮತ್ತು ಕಬ್ಬಿಣದ ಗೇಟ್‌ಗಳನ್ನು ಚಂಡಮಾರುತ ಹಾನಿಗೊಳಿಸಿದೆ. ಗಾಳಿಯ ಹೊಡೆತಕ್ಕೆ ಸುತ್ತಮುತ್ತಲಿನ ಕೆಲವು ಕಲ್ಲುಗಳು ಸಹ ಸ್ಥಳಾಂತರಗೊಂಡಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಐತಿಹಾಸಿಕ ಸ್ಮಾರಕದ ಮುಖ್ಯ ರಚನೆಗೆ ಯಾವುದೇ ಹಾನಿಯಾಗಿಲ್ಲ. ಆದರೆ ಅದರ ಸಮೀಪವಿರುವ ಫುಟ್‌ಪಾತ್‌ನ ಒಂದು ಭಾಗ ಹಾನಿಗೊಂಡಿದೆ.

ನಿರೀಕ್ಷೆಯಂತೆ, ಸೌರಾಷ್ಟ್ರ ಕರಾವಳಿಯ ಮೂಲಕ ತೌತೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸಿತು. ನೆಲಪ್ರವೇಶದ ನಂತರ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ನೆಲ ಪ್ರವೇಶಿಸುವಾಗ ಗಾಳಿಯು ಪ್ರತಿಗಂಟೆಗೆ 150-170 ಕಿ.ಮೀ. ವೇಗದಲ್ಲಿ ಬೀಸುತ್ತಿತ್ತು. ಮಂಗಳವಾರ ಮಧ್ಯಾಹ್ನದ ವೇಳೆಗೆ 120 ಕಿ.ಮೀ. ವೇಗಕ್ಕೆ ಕುಸಿದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೌತೆ ಚಂಡಮಾರುತವು ಇತ್ತೀಚಿನ ದಶಕಗಳಲ್ಲಿಯೇ ಅತ್ಯಂತ ತೀವ್ರವಾದುದಾಗಿತ್ತು. ಆದರೆ, ಅತ್ಯುತ್ತಮ ಮುನ್ಸೂಚನೆ ವ್ಯವಸ್ಥೆಯಿಂದಾಗಿ ಅಪಾಯದ ಪ್ರದೇಶದಲ್ಲಿದ್ದ ಸುಮಾರು ಎರಡು ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಹಾಗಾಗಿ, ಸಾವು ನೋವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...