ನೌಕರರ ಸಂಘದ ಅಧ್ಯಕ್ಷರಾಗಿ ಅನಂತ ಭಟ್ಕಳ   ಆಯ್ಕೆ

Source: S.O. News Service | By MV Bhatkal | Published on 3rd July 2019, 3:57 PM | Coastal News | Don't Miss |

ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭಟ್ಕಳ ಶಾಖೆಯ ಪಧಾಧಿಕಾರಿಗಳ ಚುನಾವಣೆಯಲ್ಲಿ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅನಂತ ನಾರಾಯಣ ಭಟ್ಕಳ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲೂಕಿನ ನೌಕರರ ಭವನದಲ್ಲಿ ನಡೆದ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಅವರು ಆಯ್ಕೆಯಾಗಿದ್ದಾರೆ. ಕೃಷಿ ಇಲಾಖೆಯ ಅಧೀಕ್ಷಕಿ  ವಿದ್ಯಾ ಹೆಗಡೆ ಖಜಾಂಚಿಯಾಗಿ ಆಯ್ಕೆಯಾದರೆ ಬೆಳಕೆ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪ್ರಕಾಶ ಶಿರಾಲಿ ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪದವಿಪೂರ್ವ ಕಾಲೇಝಿನ ಪ್ರಾಂಶುಪಾಲ ವಸಂತ ಗಾಂವಕರ್, ಗೊರ್ಟೆಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಧ್ಯಾಪಕ ರಾಘವೇಂದ್ರ ನಾಯ್ಕ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...