ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು : ಎಸ್ ಎನ್ ಚನ್ನಬಸಪ್ಪ

Source: SO News | By Laxmi Tanaya | Published on 2nd June 2023, 10:06 PM | State News | Don't Miss |

ಶಿವಮೊಗ್ಗ :   ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ ಶುಕ್ರವಾರ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪಾಥ್‍ವೇಸ್ ಸಭಾಂಗಣದಲ್ಲಿ "ಮಳೆನೀರು ಸಂರಕ್ಷಣೆ  ಮತ್ತು ಜಿಲ್ಲಾ ಮಟ್ಟದ  ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧಾ "ಕಾರ್ಯಕ್ರಮ ನಡೆಯಿತು.

      ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಚನ್ನಬಸಪ್ಪರವರು ನೆರವೇರಿಸಿ ಮಾತನಾಡಿ, ಈಗಿನ ಯುವಕ, ಯುವತಿಯರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೋರಿಸಬೇಕು ಎಂದರು. 

ನೀರಿನ ಮಹತ್ವದ ಬಗ್ಗೆ, ಮಳೆ ನೀರಿನ ಕೊಯ್ಲುನಿಂದ ಆಗುವ ಪ್ರಯೋಜನ, ಪರಿಸರ ಸಂರಕ್ಷಣೆ ಕುರಿತು ಹೇಳಿದರು.
 
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಪ್ರೋ.ರಾಜೇಶ್ವರಿ. ಎನ್ ಮಾತನಾಡಿ ಮಳೆ ನೀರನ್ನು ಹೇಗೆ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು.

       ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಪ್ಪ.ಕೆ. ತೊದಲಬಾಗಿಯವರು ಜಾತಿ, ಧರ್ಮ, ಎಲ್ಲವುಗಳಿಗಿಂತ ಅತಿ ಮುಖ್ಯ  ಗಿಡ, ಮರಗಳು. ಇವುಗಳ ಉಳಿವಿಗೆ ನಾವು ಕೈಜೋಡಿಸಬೇಕು.  ಮರುಭೂಮಿಯೂ ಸಹ ಮಳೆ ನೀರು ಕೊಯ್ಲು ಪದ್ಧತಿಯನ್ನು ಹೇಗೆ ಅಳವಡಿಸಿಕೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. 

     ಕುವೆಂಪು ವಿವಿ ಎನ್ ಎಸ್. ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಅವರು, ಮಳೆನೀರು ಸಂಕ್ಷಣೆ ಕುರಿತು  ಮಾತನಾಡಿ, ನಾವು ಪ್ರಕೃತಿಯನ್ನು ಕಾಪಾಡಿದರೆ ನಮಗೆ ಪ್ರಕೃತಿ ಉಡುಗೊರೆಯಾಗಿ ದೊರೆಯುತ್ತದೆ ಎಂದರು.

      ಈ ವೇಳೆ ಭಾಗವಹಿಸಿದ ಎಲ್ಲರೂ ಜಲಪ್ರತಿಜ್ಞೆಯನ್ನು ತೆಗೆದು ಕೊಳ್ಳಲಾಯಿತು.  ರಸಪ್ರಶ್ನೆ/ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.

    ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಸ.ವಿ.ಕಾಲೇಜಿನ ಎನ್. ಎಸ್. ಎಸ್ ಕಾರ್ಯಕ್ರಮ ಅಧಿಕಾರಿ  
ಡಾ. ನಾಗಾರ್ಜುನ್,  ಕಾಲೇಜಿನ ಸಿಬ್ಬಂದಿ ವರ್ಗದವರು, ಜಿಲ್ಲೆಯ ವಿವಿಧ ಕಾಲೇಜಿನಿಂದ ಆಗಮಿಸಿದ್ದ ಸ್ಪರ್ಧಿಗಳು, ಕಾಲೇಜು  ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...