ಸಾವಿನ ಸಂಖ್ಯೆ ಹೆಚ್ಚಳ, ಲಸಿಕೆ ನೀಡಿಕೆ ಇಳಿಮುಖ: ರಾಹುಲ್‌ ಟೀಕೆ

Source: PTI | Published on 20th May 2021, 3:16 PM | National News |

ನವದೆಹಲಿ: ‘ಕೇಂದ್ರ ಸರ್ಕಾರವು ಜನರ ಗಮನವನ್ನು ನಿಜವಾದ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯುತ್ನ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

‘ದೇಶದಲ್ಲಿ ಕೋವಿಡ್‌ ಲಸಿಕೆಯನ್ನು ನೀಡುತ್ತಿರುವ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.  ಇನ್ನೊಂದೆಡೆ ಕೋವಿಡ್‌ ಸಾವುಗಳು ಹೆಚ್ಚಾಗುತ್ತಿವೆ. ಸುಳ್ಳನ್ನು ಹರಡುವುದು, ಜನರ ಗಮನವನ್ನು ಬೇರೆಡೆ ಸೆಳೆಯುವುದು, ಸತ್ಯವನ್ನು ಮರೆಮಾಚುವ ಮೂಲಕ ಗದ್ದಲವನ್ನು ಸೃಷ್ಟಿಸುವುದು ಕೇಂದ್ರ ಸರ್ಕಾರದ ನೀತಿ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ಸಂಬಂಧಿಸಿದ ಗ್ರಾಫ್‌ವೊಂದನ್ನು ಹಂಚಿಕೊಂಡಿದ್ದಾರೆ.

‘ಭಾರತದಲ್ಲಿ ಒಂದೇ ದಿನ 4,529 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆಯು 2,83,248ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 2.67 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಭಾರತದ ಒಟ್ಟು ಪ್ರಕರಣಗಳ ಸಂಖ್ಯೆಯು 2,54,96,330ಕ್ಕೆ ಹೆಚ್ಚಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಹೇಳಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...