ಹಳ್ಳಿಗಳಲ್ಲಿ ಸೋಂಕು ತಡೆಗೆ ಕೇಂದ್ರದಿಂದ ಮಾರ್ಗಸೂಚಿ

Source: PTI | Published on 17th May 2021, 5:55 PM | National News |

ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಕೋವಿಡ್‌ ಸೆಂಟರ್‌ ತೆರೆಯಿರಿ ಹೋಂ ಐಸೋಲೇಷನ್ ಕಷ್ಟ, ಕೋವಿಡ್ ಸೆಂಟರಲ್ಲಿ ಚಿಕಿತ್ಸೆ ನೀಡಿ

ನವದೆಹಲಿ: ಮಹಾನಗರಗಳ ಬಳಿಕ ಇದೀಗ ಗ್ರಾಮಾಂತರ ಪ್ರದೇಶದಲ್ಲೂ ಕೊರೋನಾ ಸೋಂಕಿನ ಅಬ್ಬರ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ವೈರಸ್ ಸೋಂಕು ನಿಗ್ರಹಿಸಲು ಕೇಂದ್ರ ಸರ್ಕಾರ ಹೊಸದಾಗಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನಗರಕ್ಕೆ ಹೊಂದಿ ಕೊಂಡಿರುವ ಗ್ರಾಮೀಣ ಪ್ರದೇಶ ಹಾಗೂ ಹಳ್ಳಿಗಳಲ್ಲಿ 30 ಹಾಸಿಗೆ ಸಾಮರ್ಥ್ಯ ಕೋವಿಡ್ ಕೇರ್ ಸೆಂಟರ್ ತೆರೆಯು ರಾಜ್ಯಗಳಿಗೆ ಸಲಹೆ ಮಾಡಿದೆ.

ಹಳ್ಳಿಗಳಲ್ಲಿ ಹೋಂ ಅಸಾಧ್ಯ. ಹೀಗಾಗಿ ಪೂರ್ವ ಅನಾರೋಗ್ಯ ಸಮಸ್ಯೆ ಹೊಂದಿದ ಲಕ್ಷಣರಹಿತ ಸೋಂಕಿತರು ಅಥವಾ ಸೌಮ್ಯ ಲಕ್ಷಣದ ಸೋಂಕಿತರಿಗಾಗಿ ಈ ಕೋವಿಡ್ ಕೇರ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ತಾತ್ಕಾಲಿಕ ಆಸ್ಪತ್ರೆಗಳನ್ನು ಶಾಲೆ, ಸಮುದಾಯ ಭವನ, ಕಲ್ಯಾಣ ಮಂಟಪ, ಪಂಚಾಯಿತಿ ಕಟ್ಟಡಗಳಲ್ಲಿ ತೆರೆಯ ಬಹುದು. ಆದರೆ ಈ ಕೇಂದ್ರಗಳು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಿಗೆ ಸಮೀಪವಿ ರಬೇಕು. ಪಂಚಾಯಿತಿ ಹಾಗೂ ಶಾಲಾ ಮೈದಾನದಲ್ಲೂ ಟೆಂಟ್ ಹಾಕಿ ಕೋವಿಡ್ ಕೇರ್ ಸೆಂಟರ್ ಆರಂಭಿಸಬಹುದು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು ಸೇರಿದಂತೆ ಸಾರ್ವಜನಿಕರ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಕೇಂದ್ರ ಗಳಲ್ಲೂ ರಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಕಿಟ್‌ಗಳು ಲಭ್ಯವಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಹೇಳುತ್ತದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...