06 ಪಡಿತರ ಚೀಟಿಗಳ ಸರೆಂಡರ್ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದ ನೌಕರರಿಂದ ರೂ.5,19,060/- ದಂಡ ಸಂಗ್ರಹ

Source: S.O. News Service | By MV Bhatkal | Published on 18th June 2020, 7:29 PM | State News | Don't Miss |

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಪಡಿತರ ಚೀಟಿಗಳನ್ನು ರದ್ದುಪಡಿಸುವ ಅಭಿಯಾನವನ್ನು ಕೈಗೊಂಡ ನಂತರ 906 ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಅಕ್ರಮ ಪಡಿತರ ಚೀಟಿದಾರರು ಸರೆಂಡರ್ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 2258 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕ್ರಮಕೈಗೊಳ್ಳಲಾಗಿದೆ. ಆ ಪೈಕಿ 1008 ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿ ಸರೆಂಡರ್ ಅಭಿಯಾನ ಪ್ರಾರಂಭವಾದ ನಂತರ ಇಲ್ಲಿಯವರೆಗೆ ಜಿಲ್ಲೆಯಲ್ಲಿ ರೂ.5,19,060/-ಗಳನ್ನು ದಂಡದ ರೂಪದಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದ ಕಂದಾಯ, ರೇಲ್ವೆ, ಶಿಕ್ಷಣ ಮತ್ತು ಕಾರ್ಪೊರೇಷನ್ ವಲಯದ ಸರ್ಕಾರಿ ನೌಕರರಿಂದ ವಸೂಲು ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿನಿರ್ದೇಶಕ ಸದಾಶಿವ ಮರ್ಜಿ ತಿಳಿಸಿದ್ದಾರೆ. 
 ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗೆ ಕೆಳಗಿರುವ ಪಡಿತರ ಚೀಟಿಯನ್ನು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಪಡೆದುಕೊಂಡಿದ್ದಲ್ಲಿ ತಕ್ಷಣ ಅದನ್ನು ಆಹಾರ ಇಲಾಖೆಗೆ ಹಿಂದಿರುಗಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. 
ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಸ್ವಾಮ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದಲ್ಲಿ ಒಂದು ತಿಂಗಳೊಳಗಾಗಿ ಹಿಂದಿರುಗಿಸುವಂತೆ ಸರ್ಕಾರದಿಂದ ಆದೇಶವಾಗಿದ್ದು, ಅಂತಹ ಅಧಿಕಾರಿ, ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸರ್ಕಾರ ಆದೇಶಿಸಿದೆ. 
ಜಿಲ್ಲೆಯಲ್ಲಿ ಈಗಲೂ ಸಹಿತ ಕೆಲ ಸರ್ಕಾರಿ, ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ ಮತ್ತು ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಶಂಕೆಯಿದ್ದು, ಅಂತಹ ಸರ್ಕಾರಿ ನೌಕರರು ತಕ್ಷಣ ಆಹಾರ ಇಲಾಖೆಗೆ ಹಿಂದಿರುಗಿಸುವಂತೆ ತಿಳಿಸಲಾಗಿದೆ.
ಒಂದು ವೇಳೆ ಕಛೇರಿಗೆ ಸರೆಂಡರ್ ಮಾಡದೇ ಇದ್ದಲ್ಲಿ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆ ಮಾಡಿ, ಯಾವಾಗಿನಿಂದ ಎಷ್ಟು ಅಕ್ಕಿಯನ್ನು ಪಡೆದಿದ್ದಾರೆ ಎಂಬುದನ್ನು ಲೆಕ್ಕಮಾಡಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಸೂಲಿ ಮಾಡುವುದರ ಜೊತೆಗೆ ಅಂತಹವರ ವಿರುದ್ಧ Karnataka Prevention of Unauthorized Possession of Ration Cards Order 1977ರ ಅನ್ವಯ ಕ್ರಮ ಜರುಗಿಸಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...