ಸೀರಮ್ ಇನ್‌ಸ್ಟಿಟ್ಯೂಟ್‌ಗೆ 1 ಕೋ.ರೂ. ವಂಚನೆ; ಏಳು ಮಂದಿಯ ಬಂಧನ

Source: Vb | By I.G. Bhatkali | Published on 27th November 2022, 9:52 AM | National News |

ಪುಣೆ: ಭಾರತದ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಸೀರಮ್ ಇನ್‌ಸ್ಟಿಟ್ಯೂಟ್‌ನಿಂದ ವಂಚಕರು 1.01 ಕೋಟಿ ರೂಪಾಯಿ ದೋಚಿರುವ ಪ್ರಕರಣವೊಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪುಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ)ದ ನಿರ್ದೇಶಕರಲ್ಲಿ ಒಬ್ಬರಾಗಿರುವ ಸತೀಶ್ ದೇಶಪಾಂಡೆಗೆ ಈ ವರ್ಷದ ಸೆಪ್ಟೆಂಬರ್‌ನಲ್ಲಿ ತಾನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆದಾರ್ ಪೂನಾವಾಲ ಎಂಬುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ವಾಟ್ಸ್ ಆ್ಯಪ್‌ನಲ್ಲಿ ಸಂದೇಶವೊಂದನ್ನು ಕಳುಹಿಸಿ, ಏಳು ವಿವಿಧ ಖಾತೆಗಳಿಗೆ ಹಣವನ್ನು ಕಳುಹಿಸುವಂತೆ ಸೂಚಿಸಿದನು ಎಂಬುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂದೇಶವು ಆದಾರ್ ಪೂನಾವಾಲರಿಂದಲೇ ಬಂದಿದೆ ಎಂದು ನಂಬಿದ ಸತೀಶ್ ದೇಶಪಾಂಡೆ, ವ್ಯಕ್ತಿಯು ಹೇಳಿದ ಖಾತೆಗಳಿಗೆ ಒಟ್ಟು 1.01 ಕೋಟಿ ರೂಪಾಯಿಯನ್ನು ವರ್ಗಾಯಿಸಿದರು. ಕಂಪೆನಿಗೆ ವಂಚಿಸಲಾಗಿದೆ ಎನ್ನುವುದು ನಂತರವಷ್ಟೇ ಗೊತ್ತಾಯಿತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಣ ವರ್ಗಾವಣೆಯಾಗಿರುವ 8 ಖಾತೆಗಳ ಮೇಲೆ ಗಮನ ಹರಿಸಿದರು.

ಈ ಏಳು ವ್ಯಕ್ತಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಅವರನ್ನು ದೇಶದ ವಿವಿಧ ಭಾಗಗಳಿಂದ ಬಂಧಿಸಲಾಗಿದೆ. ಆದರೆ, ವಂಚನೆಯ ಸೂತ್ರಧಾರಿ ತಪ್ಪಿಸಿಕೊಂಡಿದ್ದಾನೆ'' ಎಂದು ಉಪ ಪೊಲೀಸ್ ಕಮಿಶನ‌ ಸ್ಥಾರ್ತನಾ ಪಾಟೀಲ್ ಹೇಳಿದರು. ಈ ಎಲ್ಲಾ ಖಾತೆಗಳನ್ನು ಹಾಗೂ ಈ ಖಾತೆಗಳಿಂದ ಮುಂದಕ್ಕೆ ಹಣ ವರ್ಗಾವಣೆಗೊಂಡ ಇತರ 40 ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

“ಈ ಖಾತೆಗಳಲ್ಲಿರುವ 13 ಲಕ್ಷ ರೂ.ಗಳನ್ನು ಸ್ತಂಭನಗೊಳಿಸಿದ್ದೇವೆ” ಎಂದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...