ಹೊಸದಿಲ್ಲಿ: ದೇಶದಲ್ಲಿ ಮೊದಲಬಾರಿಗೆ ಒಂದೇ ದಿನ 1ಲಕ್ಷ ಕೊರೋನ ಪ್ರಕರಣ ದಾಖಲು

Source: VB | By S O News | Published on 6th April 2021, 12:37 PM | National News |

ಹೊಸದಿಲ್ಲಿ: ಕೊರೋನ ಸಾಂಕ್ರಾಮಿಕ ರೋಗ ಹರಡಲು ಆರಂಭಿಸಿದ ಬಳಿಕ ಮೊದಲ ಬಾರಿಗೆ ಒಂದೇ ದಿನ ಅತ್ಯಧಿಕ 1,03,558 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನ ಪ್ರಕರಣಗಳ 1,25,89,067ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಪರಿಷ್ಕರಿಸಿದ ದತ್ತಾಂಶ ಹೇಳಿದೆ.

ಕಳೆದ ವರ್ಷ ಸೆಪ್ಟಂಬರ್ 17ರಂದು ಒಂದೇ ದಿನ ಅತ್ಯಧಿಕ 97,894 ಪ್ರಕರಣಗಳು ವರದಿಯಾಗಿದ್ದವು. ಕೊರೋನ ಆರಂಭವಾದ ಬಳಿಕ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಇದಾಗಿತ್ತು. ಕಳೆದ 24 ಗಂಟೆಗಳಲ್ಲಿ ದಾಖಲಾದ ಪ್ರಕರಣಗಳು ಇದನ್ನು ಮೀರಿಸಿವೆ. ಒಂದೇ ದಿನ 478 ಸೋಂಕಿತರು ಸಾವನ್ನಪ್ಪುವುದರೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ  1,65,101ಕ್ಕೆ ಏರಿಕೆಯಾಗಿದೆ ಎಂದು ಬೆಳಗ್ಗೆ 8 ಗಂಟೆಗೆ ಪರಿಷ್ಕೃತಗೊಂಡ ದತ್ತಾಂಶ ಹೇಳಿದೆ.

ಕಳೆದ ವರ್ಷ ದೇಶದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಒಂದೇ ದಿನ 20,000

ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಪ್ರಧಾನಿ ಮೋದಿ, ಕೇಂದ್ರ ಆರೋಗ್ಯ ಸಚಿವರು ಎಲ್ಲಾ ರಾಜ್ಯ ಸರಕಾರಗಳೊಂದಿಗೆ ಉನ್ನತ ಮಟ್ಟದ ಸಭೆ  ನಡೆಸಲಿದ್ದಾರೆ  ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳಿವೆ.

ಇದ್ದುದು 97,894ಕ್ಕೆ ಏರಿಕೆಯಾಗಲು 76 ದಿನಗಳು ಹಿಡಿದಿತ್ತು. ಈ ಬಾರಿ ಒಂದೇ ದಿನ 1 ಲಕ್ಷಕ್ಕೆ ಏರಿಕೆಯಾಗಲು ಕೇವಲ 25  (ವಾರ್ಚ್ 10ರಿಂದ ಎಪ್ರಿಲ್ 4) ದಿನಗಳನ್ನು ತೆಗೆದುಕೊಂಡಿದೆ.

ಸತತ 26ನೇ ದಿನಕ್ಕೆ ಸ್ಥಿರ ಏರಿಕೆಯನ್ನು ದಾಖಲಿಸಿದ ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣದ ಶೇ. 5.89 ರಷ್ಟಿದ್ದು, 7,41,830ಕ್ಕೆ ಏರಿಕೆಯಾಗಿದೆ. ಗುಣಮುಖರಾಗುತ್ತಿರುವ ಪ್ರಮಾಣ ಶೇ. 92.80ಕ್ಕೆ ಇಳಿಕೆಯಾಗಿದೆ. ಫೆಬ್ರವರಿ 12ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ ಅತಿ ಕಡಿಮೆ 1,35,926ಕ್ಕೆ ಇಳಿದಿತ್ತು. ಇದು ಒಟ್ಟು ಸೋಂಕು ಪ್ರಕರಣದ ಶೇ. 1.25.

ಕೊರೋನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,16,82,136ಕ್ಕೆ ಏರಿಕೆಯಾದರೆ, ಸಾವಿನ ಪ್ರಮಾಣ ಶೇ. 1.31ಕ್ಕೆ ಇಳಿಕೆಯಾಗಿದೆ ಎಂದು ದತ್ತಾಂಶ ಹೇಳಿದೆ.

ಭಾರತದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ ಆಗಸ್ಟ್ 7ರಂದು 20 ಲಕ್ಷ, ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ರಂದು 40 ಲಕ್ಷ, ಸೆಪ್ಟಂಬರ್ 16ರಂದು 50 ಲಕ್ಷ, ಸೆಪ್ಟೆಂಬರ್ 28ರಂದು 60 ಲಕ್ಷ, ಅಕ್ಟೋಬರ್ 11ರಂದು 70 ಲಕ್ಷ, ಅಕ್ಟೋಬರ್ 29ರಂದು 80 ಲಕ್ಷ, ನವೆಂಬರ್ 20ರಂದು 90 ಲಕ್ಷ, ಡಿಸೆಂಬರ್ 19ರಂದು 1 ಕೋಟಿ ದಾಟಿದೆ.

ರವಿವಾರ 8,93,749 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಎಪ್ರಿಲ್ 4ರ ವರೆಗೆ 24,90,19,657 ಮಾದರಿ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್‌ ಹೇಳಿದೆ.

 

'ಮೇ ಅಂತ್ಯದವರೆಗೆ ಕೋವಿಡ್ ಸ್ಥಿತಿ ಗಂಭೀರ'
ರಾಜ್ಯಕ್ಕೆ 15ಲಕ್ಷಕ್ಕೂ ಹೆಚ್ಚು ಕೋವಿಡ್ ಡೋಸ್ ಬಂದಿದೆ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಂಕಿತರ ಸಂಖ್ಯೆ ಹೆಚ್ಚಾದರೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯಾಗುತ್ತದೆ. ಸರಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಇನ್ನಷ್ಟು ಚರ್ಚೆ ಮಾಡುತ್ತೇನೆ. ಇನ್ನು ಮೇ ಅಂತ್ಯದವರೆಗೆ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಎರಡನೇ ಅಲೆಯನ್ನು ನಿಯಂತ್ರಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಸುಧಾಕರ್ ಮನವಿ ಮಾಡಿದರು.

ಕೋವಿಡ್ ಸ್ಥಿತಿ ಗಂಭೀರ

ರಾಜ್ಯದಲ್ಲಿ ನಿನ್ನೆವರೆಗೆ 46,02,000 ಮಂದಿಗೆ ಲಸಿಕೆ ನೀಡಲಾಗಿದೆ. 12 ಲಕ್ಷ ಲಸಿಕೆ ರಾಜ್ಯದಲ್ಲಿತ್ತು. ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ ಬಳಿಕ 15 ಲಕ್ಷಕ್ಕೂ ಹೆಚ್ಚು ಲಸಿಕೆ ದೊರೆತಿದೆ. 10 ಲಕ್ಷ ಡೋಸ್ ಬೆಂಗಳೂರಿಗೆ ಹಾಗೂ 5 ಲಕ್ಷ ಡೋಸ್ ಬೆಳಗಾವಿಗೆ ರವಾನಿಸಲಾಗಿದೆ. ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...