ಬಸ್-ಟೆಂಪೊ ಡಿಕ್ಕಿ ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Source: S.O. News Service | By MV Bhatkal | Published on 7th July 2019, 6:34 PM | Coastal News | Don't Miss |

ಗೋಕರ್ಣ:ಬಸ್ ಹಾಗೂ ಪ್ರಯಾಣಿಕರ ಟೆಂಪೊ ನಡುವೆ ರಾಷ್ಟ್ರೀಯ ಹೆದ್ದಾರಿ 66 ರ ಬರ್ಗಿ ಸಮೀಪ ಭಾನುವಾರ ನಡೆದ ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್ ಹಾಗೂ ಬಾಗಲಕೋಟೆ ಜಿಲ್ಲೆ ಬಾದಾಮಿಯಿಂದ ಉಡುಪಿಗೆ ಕಾರ್ಮಿಕರನ್ನು ತುಂಬಿಕೊಂಡು ಹೊರಟಿದ್ದ ಮಹೇಂದ್ರ ಟೆಂಪೊ ನಡುವೆ ಬೆಳಗ್ಗೆ 5.30 ರ ಹೊತ್ತಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಟೆಂಪೊ ಚಾಲಕ ಹಾಗೂ ಅದರಲ್ಲಿ ಪ್ರಯಾಣಿಸುತ್ತಿದ್ದ 4 ವರ್ಷದ ಬಾಲಕಿ ದೀಪಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರಿಗೂ ಕುಮಟಾ‌ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಉಡುಪಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...