ಬಿಜೆಪಿಯಿಂದ ವಿವಿಧ ಸಮುದಾಯಗಳ ಬಡವರಿಗೆ 1000 ಆಹಾರ ಪದಾರ್ಥದ ಕಿಟ್‌ ವಿತರಣೆ

Source: sonews | By Staff Correspondent | Published on 30th April 2020, 3:11 PM | State News |

ಶ್ರೀನಿವಾಸಪುರ: ದೇಶದಿಂದ ಕೊರೋನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಅಗತ್ಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಬುಧವಾರ ವಿವಿಧ ಸಮುದಾಯಗಳ ಬಡವರಿಗೆ 1000 ಆಹಾರ ಪದಾರ್ಥದ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಕೊರೊನಾ ನಿರ್ಮೂಲನೆ ಇಂದಿನ ಪ್ರಮುಖ ಆದ್ಯತೆಯಾಗಿದೆ. ಈ ರೋಗಕ್ಕೆ ಔಷಧ ಇಲ್ಲದ ಕಾರಣ ಪ್ರತಿಯೊಬ್ಬರೂ ಕಡ್ಡಾಯವಾಗಿ  ಅಂತರ ಪಾಲನೆ ಮಾಡಬೇಕು. ನಿಯಮಿತವಾಗಿ ಕೈ ತೊಳೆಯಬೇಕು ಹಾಗೂ ಮಾಸ್ಕ್‌ ಧರಿಸಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಬಡವರಿಗೆ ಆಹಾರ ಪದಾರ್ಥ, ಮಾಸ್ಕ್‌ ವಿತರಿಸಲಾಗುತ್ತಿದೆ. ಯಾರಾದರೂ ಆರೋಗ್ಯ ಸಮಸ್ಯೆ ಇರುವುದಾಗಿ ದೂರವಾಣಿ ಮೂಲಕ ತಿಳಿಸಿದರೆ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸಂಕಷ್ಟದ ಸಂದರ್ಭದಲ್ಲಿ ಮಾನವೀಯ ನೆರವು ನೀಡುವುದು ಪಕ್ಷದ ಉದ್ದೇಶವಾಗಿದೆ ಎಂದು ಹೇಳಿದರು.

ಮುಖಂಡರಾದ ಜಯರಾಮರೆಡ್ಡಿ. ಎಂ.ಲಕ್ಷ್ಮಣಗೌಡ, ಎಸ್‌.ಬಿ.ಮುನಿವೆಂಕಟಪ್ಪ, ಎ.ಅಶೋಕರೆಡ್ಡಿ, ಇ ಶಿವಣ್ಣ, ನಾಗರಾಜ್‌ ಇದ್ದರು.

ವಿತರಣೆ: ತಾಲ್ಲೂಕಿನ ರಾಯಲ್ಪಾಡು, ಗೌನಿಪಲ್ಲಿ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಬಡವರಿಗೆ ಆಹಾರ ಪದಾರ್ಥಗಳ ಕಿಟ್‌ ಹಾಗೂ ಮಾಸ್ಕ್‌ ವಿತರನೆ ಮಾಡಲಾಯಿತು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!