ಕೊಡಗಿಗೆ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಅನಿವಾರ್ಯ : ಡಿಕೆಶಿ

Source: so news | Published on 9th August 2020, 11:58 PM | State News | Don't Miss |


 
ಮಡಿಕೇರಿ : ಕೊಡಗು ಭಾಗದ ಜನರ ಶಾಶ್ವತ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಿ ಮುಂದಿನ ಅಧಿವೇಶನದಲ್ಲಿ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಪ್ರವಾಹ ಪೀಡಿತ ಹಾಗು ಭೂ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು…
‘ಇದು ವ್ಯಕ್ತಿ ಅಥವಾ ಪಕ್ಷದ ವಿಚಾರವಲ್ಲ. ಇದು ನಾವು ಹುಟ್ಟಿ ಬೆಳೆದ ತಾಯ್ನಾಡಿನ ವಿಚಾರ. ಕಳೆದ ಮೂರು ವರ್ಷಗಳಿಂದ ಈ ಸಮಸ್ಯೆ ಎದುರಾಗುತ್ತಿದ್ದು, ಅದಕ್ಕೂ ಮುಂಚೆಯೂ ಈ ಸಮಸ್ಯೆ ಕಾಣಿಸಿಕೊಂಡಿತ್ತು.
ನಾನಿಲ್ಲಿ ಯಾವುದೋ ಒಂದು ಸರ್ಕಾರ, ಒಂದು ಪಕ್ಷದ ವಿರುದ್ಧ ದೂರಲು ಬಂದಿಲ್ಲ. ಈ ಸಮಸ್ಯೆಗೆ ಎಲ್ಲರೂ ಒಟ್ಟಿಗೆ ಸೇರಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
ಇಲ್ಲಿನ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಮನೆಗಳಾಗಬೇಕು. ಅನೇಕ ಕಡೆ ತಡೆಗೋಡೆ ನಿರ್ಮಾಣವಾಗಬೇಕು. ಇಲ್ಲಿನ ಜನ ಕೃಷಿ ಹಾಗೂ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಇಲ್ಲಿ ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ಸಂಪರ್ಕ ಕಲ್ಪಿಸಬೇಕು

Read These Next

ಸಪ್ಟೆಂಬರ್ 28 ರಂದು ಕರ್ನಾಟಕ ಬಂದ್ ಹಿನ್ನೆಲೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 29 ಕ್ಕೆ.

ಬೆಂಗಳೂರು : ಸಪ್ಟೆಂಬರ್ 28 ರಂದು ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮುಂದೂಡಿದೆ.

ವಿಶ್ವಸಂಸ್ಥೆಯ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಭಾರತವನ್ನು ಎಷ್ಟು ಸಮಯ ಹೊರಗಿಡುತ್ತೀರಿ: ಪ್ರಧಾನಿ ಮೋದಿ

ವಿಶ್ವಸಂಸ್ಥೆಯ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಭಾರತವನ್ನು ಎಷ್ಟು ಸಮಯ ಹೊರಗಿಡುತ್ತೀರಿ: ಪ್ರಧಾನಿ ಮೋದಿ