ರಾಜ್ಯದಲ್ಲಿ ಕೊರೋನಾಗೆ 101 ಬಲಿ: ಬೆಂಗಳೂರಿನಲ್ಲಿ 2147 ಸೇರಿ ಇಂದು ಒಟ್ಟು 6,670 ಪ್ರಕರಣ ಪತ್ತೆ 1.64 ಲಕ್ಷ ಸೋಂಕು!

Source: uni | Published on 8th August 2020, 12:13 AM | State News | Don't Miss |

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 101 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,670 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ. 
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 101 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 2,998ಕ್ಕೆ ಏರಿಕೆಯಾಗಿದೆ. 
ಒಟ್ಟಾರೆ 1,64,924 ಕೊರೋನಾ ಪ್ರಕರಣಗಳ ಪೈಕಿ 84,232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 77,686 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇನ್ನು ರಾಜ್ಯಾದ್ಯಂತ ಸುಮಾರು 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Read These Next

ಕೋವಿಡ್-19 ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ - ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್

ಬೆಂಗಳೂರು: ಕೋವಿಡ್-19 ವಿಷಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿರುವುದಿಲ್ಲ ಹಾಗೂ ಗುಣಮಟ್ಟದ ...

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...