ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದುಕೊಂಡ1.06 ಲಕ್ಷ ವಿದ್ಯಾರ್ಥಿಗಳು:ಖಾಸಗಿ ಶಾಲೆಗೆ ಹೋಗಲು ನಿರಾಸಕ್ತಿ

Source: sonews | By Staff Correspondent | Published on 24th September 2020, 2:20 PM | State News |

ಬೆಂಗಳೂರು : ಈ ವರ್ಷ ಸರ್ಕಾರಿ ಶಾಲೆಗಳಿಗೆ 1.06 ಲಕ್ಷ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಪಡೆದಿದ್ದಾರೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷ ದಾಖಲಾಗಿದ್ದ ಒಟ್ಟು 1.05 ಕೋಟಿ ವಿದ್ಯಾರ್ಥಿಗಳಲ್ಲಿ ಈಗಾಗಲೇ 85 ಲಕ್ಷ ವಿದ್ಯಾರ್ಥಿಗಳು ಮತ್ತೆ ನೋಂದಣಿ ಮಾಡಿಕೊಂಡಿದ್ದಾರೆ. ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ 45 ಲಕ್ಷ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ 40 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಸೆ. 30ರವರೆಗೆ ನೋಂದಣಿ ನಡೆಯಲಿದ್ದು, ಇನ್ನೂ 50 ಸಾವಿರ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗುವ ನಿರೀಕ್ಷೆ ಇದೆ. ಹಲವು ವರ್ಷಗಳಿಂದ ವಿದ್ಯಾರ್ಥಿಗಳ ನೋಂದಣಿ ಪ್ರಮಾಣ ಸರಾಸರಿ ಒಂದೂವರೆ ಲಕ್ಷದಷ್ಟು ಕಡಿಮೆಯಾಗುತ್ತಲೇ ಬಂದಿದೆ. ಆದರೆ, ಈ ವರ್ಷ ಅದಕ್ಕೆ ತದ್ವಿರುದ್ಧವಾಗಿದೆ. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳ ಮಧ್ಯೆ ಇದು ಹೊಸ ಬೆಳವಣಿಗೆ’ ಎಂದು ಶಿಕ್ಷಣ ಇಲಾಖೆಯ ಮೂಲಗಳು ಹೇಳಿವೆ.

‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸೇರಿ ಒಟ್ಟು 48,004 ಸರ್ಕಾರಿ ಶಾಲೆಗಳಿವೆ. 31,063 ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ನೋಂದಣಿ ಹೆಚ್ಚಳವಾಗಿದೆ. ಅನೇಕ ಶಾಲೆಗಳಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಇಮ್ಮಡಿಯಾದರೆ, ಇನ್ನೂ ಅನೇಕ ಶಾಲೆಗಳಲ್ಲಿ ಒಂದೂವರೆಪಟ್ಟು ಹೆಚ್ಚಳವಾಗಿದೆ. ವಿದ್ಯಾರ್ಥಿಗಳ ನೋಂದಣಿಯಲ್ಲಿ ಹೊಸ ದಾಖಲೆ ಸೃಷ್ಟಿಯಾಗುವ ನಿರೀಕ್ಷೆ ಇದೆ’ ಎಂದೂ ಮೂಲಗಳು ಹೇಳಿವೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್ ಮಾತನಾಡಿ‌, ‘ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ನಾನಾ ಕಾರಣಗಳಿವೆ. ಕೊರೋನದಿಂದ ಆರ್ಥಿಕವಾಗಿ ಜರ್ಜರಿತವಾದ ಕುಟುಂಬಗಳಿಗೆ ಸರ್ಕಾರಿ ಶಾಲೆಗಳು ಆಸರೆಯಾಗಿವೆ. ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಎಲ್ಲವೂ ಕಾರಣವಾಗಿದೆ. ಜತೆಗೆ ಗುಣಮಟ್ಟದ ಶಿಕ್ಷಣವೂ ಸಿಗುತ್ತದೆ ಎಂಬ ವಿಶ್ವಾಸ ಬಂದಿದೆ’ ಎಂದು ಹೇಳಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!