ಎಸ್.ಎಂ.ಕೃಷ್ಣ, ಭೈರಪ್ಪ, ಸುಧಾಮೂರ್ತಿ, ಖಾದರ್ ವಲ್ಲಿ, ರಶೀದ್ ಅಹ್ಮದ್ ಸಹಿತ ರಾಜ್ಯದ 8 ಸಾಧಕರಿಗೆ ಪದ್ಮ ಗೌರವ; ಒಟ್ಟು 106 ಮಂದಿಗೆ ಪದ್ಮ ಗರಿ

Source: Vb | By I.G. Bhatkali | Published on 26th January 2023, 10:52 AM | State News | National News |

ಹೊಸದಿಲ್ಲಿ: ಗಣರಾಜ್ಯ ದಿನದ ಮುನ್ನಾದಿನವಾದ ಬುಧವಾರ ಕೇಂದ್ರ ಸರಕಾರವು ಪ್ರತಿಷ್ಠಿತ ಪದ್ಮಪ್ರಶಸ್ತಿಗಳನ್ನು ಪ್ರಕಟಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಮತ್ತು ಸಾಮಾಜಿಕ ಕಾರ್ಯಕರ್ತೆ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿವೆ. ರಾಜ್ಯದ ಒಟ್ಟು ಎಂಟು ಮಂದಿಗೆ ಪದ್ಮ ಗೌರವ ಒಲಿದಿವೆ.

ಈ ವರ್ಷ 106 ಪದ್ಮಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಆರು ಜನರು ಪದ್ಮವಿಭೂಷಣ, ಒಂಭತ್ತು ಪದ್ಮಭೂಷಣ ಮತ್ತು 91 ಜನರು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಪಶಸ್ತಿ ವಿಜೇತರ ಪಟ್ಟಿಯಲ್ಲಿ 19 ಮಹಿಳೆಯರಿದ್ದು, ಇಬ್ಬರು ವಿದೇಶಿಯರು/ ಎನ್ನಾರೈ/ ಪಿಐಒ/ಓಸಿಐ ವರ್ಗಕ್ಕೆ ಸೇರಿದ್ದಾರೆ. ಮರಣೋತ್ತರವಾಗಿ ಏಳು ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಕರ್ನಾಟಕಕ್ಕೆ ಒಟ್ಟು ಎಂಟು ಪ್ರಶಸ್ತಿಗಳು ಸಿಕ್ಕಿದ್ದು, ಖಾದರ್ ವಲ್ಲಿ ದುಡೆಕಳ (ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಶಾ ರಶೀದ್ ಅಹ್ಮದ್ ಖಾದ್ರಿ (ಕಲೆ) ಮತ್ತು ಎಸ್.ಸುಬ್ಬರಾಮನ್ (ಪುರಾತತ್ವ) ಅವರು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ಮಾರ್ಚ್/ಎಪ್ರಿಲ್‌ನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೋಪದಿ ಮುರ್ಮು ಅವರು ಪ್ರಶಸ್ತಿಗಳನ್ನು ಪ್ರದಾನಿಸಲಿದ್ದಾರೆ. ಗುಜರಾತಿನ ಬಾಲಕೃಷ್ಣ ದೋಶಿ (ವಾಸ್ತುಶಿಲ್ಪ), ಪ.ಬಂಗಾಳದ ದಿಲೀಪ ಮಹಾಲನಬೀಸ್‌ (ಔಷಧಿ), ಮುಲಾಯಂ ಸಿಂಗ್ ಯಾದವ್ (ರಾಜಕೀಯ) ಸೇರಿದಂತೆ ಏಳು ಜನರಿಗೆ ಮರಣೋತ್ತರ ವಾಗಿ ಪದ್ಮಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...