116 ಮಂದಿಯ ಬಂಧನ: ಸಿಎಂ ಖಟ್ಟರ್; ಎಲ್ಲರನ್ನೂ ರಕ್ಷಿಸಲು ಪೊಲೀಸರಿಂದ ಸಾಧ್ಯವಿಲ್ಲ

Source: Vb | By I.G. Bhatkali | Published on 3rd August 2023, 11:40 AM | National News |

ಚಂಡಿಗಡ: ರಾಜ್ಯದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿ 116 ಮಂದಿಯನ್ನು ಬಂಧಿಸಲಾಗಿದೆ ಎಂದು ಹರ್ಯಾಣದ ಮುಖ್ಯಮಂತ್ರಿ ಮನೋಹ‌ ಲಾಲ್ ಖಟ್ಟರ್ ಬುಧವಾರ ಹೇಳಿದ್ದಾರೆ. ನೂಡ್‌ನಲ್ಲಿ ಘರ್ಷಣೆಗಳನ್ನು ನಿಯಂ ಇಣಕ್ಕೆ ತಂದ ಬಳಿಕ ಇತರೆಡೆ ಹಲವು ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ.

ಸೌಹಾರ್ದ ಇಲ್ಲದಿದ್ದರೆ, ಭದ್ರತೆ ಇರಲಾರದು. ಪರಸ್ಪರ ವಿರೋಧಿಸುತ್ತಿದ್ದರೆ ಅಲ್ಲಿ ಭದ್ರತೆ ಇರಲಾರದು. ಪ್ರತಿಯೊಬ್ಬರನ್ನು ಪೊಲೀಸರು, ಸೇನೆ, ನಾನು ಅಥವಾ ನೀವು ರಕ್ಷಿಸಲು ಸಾದ್ಯವಿಲ್ಲ.
ಮನೋಹರ್ ಲಾಲ್ ಖಟ್ಟರ್ (ಹರ್ಯಾಣ ಮುಖ್ಯಮಂತ್ರಿ)

ಗಾಯಗೊಂಡವರನ್ನು ಗುರುಗ್ರಾಮದ ಮೆಡಂಟಾ ಹಾಗೂ ನೂಡ್‌ನ ನಲ್ದಾರ್‌ನಲ್ಲಿರುವ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. 116 ಮಂದಿಯನ್ನು ಬಂಧಿಸಲಾಗಿದೆ. ಇತರ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಆರೋಪಿಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದ ಅವರು, ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಹರ್ಯಾಣ ಪೊಲೀಸ್ ಸಿಬ್ಬಂದಿ ಅಲ್ಲದೆ, ಕೇಂದ್ರ ಭದ್ರತಾ ಪಡೆಗಳ 20 ಕಂಪೆನಿಗಳನ್ನು ನಿಯೋಜಿಸಲಾಗಿದೆ. ಪಲ್ಟಾಲ್‌ನಲ್ಲಿ 3, ಗುರುಗ್ರಾಮದಲ್ಲಿ 2, ಫರೀದಾಬಾದ್‌ನಲ್ಲಿ 1 ಹಾಗೂ ನೂಹ್ ನಲ್ಲಿ 14 ಕಂಪೆನಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿರುವ ಕಟ್ಟರ್, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...