ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ 123000 ಕ್ಯುಸೆಕ್ ನೀರು ಬಿಡುಗಡೆ

Source: SO News | By Laxmi Tanaya | Published on 15th October 2020, 7:19 AM | State News | National News |

ಕಲಬುರಗಿ :  ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 108000 ಕ್ಯುಸೆಕ್ ಮತ್ತು ವೀರ್ ಜಲಾಶಯದಿಂದ 15000 ಕ್ಯುಸೆಕ್ ಸೇರಿದಂತೆ 123000 ಕ್ಯುಸೆಕ್ ನೀರು ಭೀಮಾ ನದಿಗೆ ಬುಧವಾರ ಸಾಯಂಕಾಲ ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

ಈ ನೀರು ಅಫಜಲಪೂರ್ ತಾಲೂಕಿನ ಸೊನ್ನ ಬ್ಯಾರೇಜಿಗೆ ಬರಲಿದೆ. ಭೀಮಾ ಜಲಾನಯನ ಪ್ರದೇಶದಲ್ಲಿ ಹೀಗೆ ಮಳೆ ಮುಂದುವರೆದಿದ್ದಲ್ಲಿ ಮುಂದಿನ 48 ಗಂಟೆಯಲ್ಲಿ ಸುಮಾರು 2.5 ಲಕ್ಷ ಕ್ಯುಸೆಕ್ ನೀರು ಸೊನ್ನ ಬ್ಯಾರೇಜ್ ಗೆ ಬರುವ ನಿರೀಕ್ಷೆ ಇದೆ ಎಂದು ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತ ಜಾರಿಗೆ ತರುತ್ತೇವೆ : ಗೃಹ ಸಚಿವ ಬೊಮ್ಮಾಯಿ.

ಕಾರವಾರ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತವಾಗಿ ಜಾರಿಗೆ ತರುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲುವಿಗೆ ಬಿಜೆಪಿ ಬದ್ಧ; ಕೈಗಾರಿಕಾ ಮಂತ್ರಿ ಜಗದೀಶ ಶೆಟ್ಟರ್

ಶಿರಸಿ: ಗ್ರಾಮ ಪಂಚಾಯಿತಿ ಚುನಾವಣೆ ನಮ್ಮ ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವುದು ನಮ್ಮ ...