ರಾಜ್ಯದಲ್ಲಿಂದು ದಾಖಲೆಯ 12,545 ಡಿಸ್ಚಾರ್ಜ್: ಬೆಂಗಳೂರಿನಲ್ಲಿ 3,426 ಸೇರಿ 9,464 ಮಂದಿಗೆ ಪಾಸಿಟಿವ್

Source: uni | Published on 12th September 2020, 12:34 AM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇದರ ನಡುವೆ ಇಂದು ದಾಖಲೆ 12,545 ಮಂದಿ ಕೊರೋನಾದಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 9,464 ಹೊಸ ಪ್ರಕರಣಗಳು ವರದಿಯಾಗಿದ್ದು, 130 ಮಂದಿ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,40,411ಕ್ಕೇರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,067ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 30 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 130 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,426 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,63,631ಕ್ಕೆ ಏರಿಕೆಯಾಗಿದೆ.
ಇಂದು 12,545 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,34,999ಕ್ಕೆ ಏರಿಕೆಯಾಗಿದೆ. 98,326 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 770 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...