ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯದ ಕಾರಣ , ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ ಕಾಗೇರಿ ವಿಶ್ವೇಶ್ವರ ಹೆಗಡೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟç ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ,ನಿರಂಜನ್ ಉದಯಸಿನ್ಹಾ ಸರ್ದೇಸಾಯಿ, ನಾಗರಾಜ ಅನಂತ ಶಿರಾಲಿ,ಅರವಿಂದ ಗೌಡ,ಅವಿನಾಶ್ ನಾರಾಯಣ ಪಾಟೀಲ,ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ.