ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಎನ್‌ಕೌಂಟರ್‌: 13 ನಕ್ಸಲರ ಹತ್ಯೆ

Source: PTI | Published on 21st May 2021, 7:20 PM | National News |

ಮುಂಬೈ: ‘ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಪೊಲೀಸ್‌ ಪಡೆಯ ಸಿ–60 ಕಮಾಂಡೊಗಳು  ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಕನಿಷ್ಠ 13 ನಕ್ಸಲರು ಹತರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಎಟಪಲ್ಲಿಯ ಕೊಟ್ಟಾಮಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ನಕ್ಸಲರು ಸಭೆ ಸೇರಿದ್ದ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದೆ’ ಎಂದು ಡಿಐಜಿ ಸಂದೀಪ್‌ ಪಾಟೀಲ್‌ ಅವರು ಮಾಹಿತಿ ನೀಡಿದರು.

‘ನಿಖರ ಮಾಹಿತಿ ಮೇರೆಗೆ ಸಿ–60 ಕಮಾಂಡೊಗಳನ್ನು ಒಳಗೊಂಡ ಪೊಲೀಸ್‌ ಪಡೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಕ್ಸಲರು ಮೊದಲು ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿಯಾಗಿ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಈ ನಡುವೆ ಕೆಲವು ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಂಕಿತ್‌ ಗೋಯಲ್‌ ಅವರು ಹೇಳಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...