ಹೋಂ ಕ್ವಾರಂಟೈನ್‌ ಮನೆ ಸೀಲ್‌ಡೌನ್‌: ಶ್ರೀರಾಮುಲ

Source: Prajavani | Published on 9th June 2020, 7:57 PM | Coastal News |

ಉಡುಪಿ: ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರು ಕಡ್ಡಾಯ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಅವರ ನಿವಾಸಗಳನ್ನು ಸಂಪೂರ್ಣ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದವರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹೋಂ ಕ್ವಾರಂಟೈನ್‌ನಲ್ಲಿರುವವರು ಮನೆಬಿಟ್ಟು ಹೊರಬಂದರೆ ಪ್ರಕರಣ ದಾಖಲಿಸಲಾಗುವುದು. ಕ್ವಾರಂಟೈನ್‌ಗೆ ಒಳಗಾಗುವವರು ಬಡವರಾಗಿದ್ದರೆ ಆಹಾರದ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...