ಚೆನ್ನೈ: ತ. ನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಕನಿಷ್ಠ 15 ಬಲಿ

Source: VB News | By S O News | Published on 13th February 2021, 11:54 AM | National News |

ಚೆನ್ನೈ: ತಮಿಳುನಾಡಿನ ವಿರುಧನಗರ ಜಿಲ್ಲೆಯ ಸತ್ತೂರಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದು, 36 ಜನರು ಗಾಯಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಈ ದುರಂತಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ

ಮಧ್ಯಾಹ್ನ 1:30ರ ಸುಮಾರಿಗೆ ದುರಂತ ಸಂಭವಿಸಿದೆ. ರಾಸಾಯನಿಕಗಳನ್ನು ಮಿಶ್ರಗೊಳಿಸುತ್ತಿದ್ದಾಗ ಉಂಟಾದ ಘರ್ಷಣೆ ಸ್ಪೋಟಕ್ಕೆ ಕಾರಣವಾಗಿರುವಂತೆ ಕಂಡು ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ತಿಳಿಸಿದರು.

ವಿವಿಧೆಡೆಗಳಿಂದ ತರಿಸಲಾಗಿದ್ದ 10 ಅಗ್ನಿಶಾಮಕ ವಾಹನಗಳು ಗಂಟೆಗಟ್ಟಲೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ

ಪರಿಹಾರ ಘೋಷಣೆ: ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ.ಪರಿಹಾರವನ್ನು ಘೋಷಿಸಿದ್ದಾರೆ. ಕೇಂದ್ರವು ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ.ಮತ್ತು ಗಾಯಾಳುಗಳಿಗೆ 50,000 ರೂ.ಪರಿಹಾರವನ್ನು ಘೋಷಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...