ದೇಶದ ಸ್ವಾತಂತ್ರ್ಯ ಹಾಗೂ ಸಾಮಾಜಿಕ ವ್ಯವಸ್ಥೆ ಸುಧಾರಣೆಗೆ ಶ್ರಮಿಸಿದ ಗಾಂಧೀ: ಸಚಿವ ಜಗದೀಶ್ ಶೆಟ್ಟರ್

Source: so news | Published on 3rd October 2019, 12:21 AM | State News | Don't Miss |


ಹುಬ್ಬಳ್ಳಿ: ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಾಮಾಜಿಕ ವ್ಯವಸ್ಥೆಯ ಸುಧಾರಣೆಗೂ ಶ್ರಮಿಸಿದರು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.
ಇಂದು ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ, ಮಹಾತ್ಮಾ ಗಾಂಧೀಜಿಯವರ 150ನೇ ವರ್ಷಾಚರಣೆ ಅಂಗವಾಗಿ ಸಮಾರೋಪ, ಗಾಂಧೀ ಭಜನೆ, ಪೌರ ಕಾರ್ಮಿಕರಿಗೆ ಸನ್ಮಾನ, ಉಪನ್ಯಾಸ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಪ್ರಯುಕ್ತ ಗಾಂಧೀಜಿಯವರ ಸಂದೇಶವನ್ನು ಎಲ್ಲಡೆ ಪ್ರಸಾರ ಮಾಡುವ ಸಲುವಾಗಿ ಸರ್ಕಾರದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಗಾಂಧೀಜಿ ಶಾಂತಿ ಮತ್ತು ಅಹಿಂಸೆಯನ್ನು ಅಸ್ತ್ರವಾಗಿ ಮಾಡಿಕೊಂಡು ಬ್ರಿಟೀಷರ ವಿರುದ್ದ ಹೋರಾಟ ನೆಡೆಸಿದರು. ಈಗಲೂ ಹಲವು ಕಡೆ ಅಸ್ಪೃಶ್ಯತೆ ಆಚರಣೆಯಂತಹ ಹೀನ ರೂಢಿ ಸಂಪ್ರದಾಯಗಳನ್ನು ನೋಡುತ್ತವೆ. ಸ್ವಾತಂತ್ರ್ಯ ಸಂದರ್ಭದಲ್ಲಿ ಈ ಆಚರಣೆಗಳು ಹೆಚ್ಚಾಗಿದ್ದವು. ದೇಶದಲ್ಲಿ ಅಸಮಾನತೆ, ಬಡತನ ಹೆಚ್ಚಾಗಿತ್ತು. ಇದರ ಬಗ್ಗೆ ಕಾಳಜಿ ಹೊಂದಿದ್ದ ಗಾಂಧೀಜಿ ಚಿಂತನೆ ನಡೆಸಿ, ಇವುಗಳನ್ನು ಹೋಗಲಾಡಿಸಲು ಶ್ರಮಿಸಿದರು. ಅವರ ಲೇಖನಗಳಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಬಲವಾಗಿ ಖಂಡಿಸಿದರು.
ಬಸವಣ್ಣ 12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ ವಿರುದ್ದ ಹೋರಾಟ ಮಾಡಿದ ಹಾಗೆ, ಗಾಂಧೀ ಮತ್ತು ಅಂಬೇಡ್ಕರರು ಹೋರಾಟ ನೆಡೆಸಿದರು.ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಶಿಸ್ತು ಹಾಗೂ ನೈತಿಕ ಮೌಲ್ಯಗಳಿಂದಾಗಿ ನಮ್ಮೆಲರಿಗೂ ಮಾದರಿಯಾಗಿದ್ದಾರೆ.
ಸ್ವಚ್ಛತಾ ಆಂದೋಲನ ಯಶಸ್ವಿಯಾಗ ಬೇಕಾದರೆ ಜನರ ಸಹಕಾರ ಹಾಗೂ ಸಮ್ಮೀಳನ ಅವಶ್ಯಕವಾಗಿದೆ. ರೋಟರ್, ಲಯನ್ಸ್ ಅಂತಹ ಸಂಸ್ಥೆಗಳು ಪ್ಲಾಸ್ಟಿಕ್ ಬಳಕೆಯ ಹಾನಿ ಕುರಿತು ಜಾಗೃತಿ ಮಾಡಿಸುವ ಕೆಲಸ ನಿರ್ವಹಿಸುತ್ತಿವೆ. ಪ್ಲಾಸ್ಟಿಕ್ ಗೆ ಪರ್ಯಾಯ ವಸ್ತುಗಳನ್ನು ಬಳಸುವುದರ ಮೂಲಕ ಎಲ್ಲರೂ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.

ಪೌರ ಕಾರ್ಮಿಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಾದ ಮಂಜುಳಾ ಚಲುವಾದಿ, ಹನುಮಂತಪ್ಪ ಮಾರಪ್ಪ, ತಿಮ್ಮಣ್ಣ ಗೊಸನಕೊಪ್ಪ, ದೊಡ್ಡಪ್ಪ ಗಬ್ಬೂರ, ನಾಗರಾಜ್ ಇವರನ್ನು ಸನ್ಮಾನಿಸಲಾಯಿತು.
ಮಹಾತ್ಮರಿಗೆ ಪ್ರಿಯವಾದ ಭಜನೆಗಳ ರಸದೌತಣ
ಡಾ. ಅರ್ಜುನ ವಠಾರ ಮತ್ತು ಅವರ ತಂಡದಿಂದವರು ಮಹಾತ್ಮ ಗಾಂಧೀಜಿಯವರಿಗೆ ಪ್ರಿಯವಾದ “ರಘುಪತಿ ರಾಘವ ರಾಜಾ ರಾಮ್” ಹಾಗೂ “ವೈಷ್ಣವ ಜನತೋ” ಭಜನೆಗಳನ್ನು ಪ್ರಸ್ತುತ ಪಡಿಸಿದರು.
ಗಾಂಧೀ ಹೆಜ್ಜೆಗಳನ್ನು ನೆನಪಿಸಿದ ಕಿರು ಪುಸ್ತಕ ಹಾಗೂ ಸಾಕ್ಷ್ಯಚಿತ್ರ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿದ ಬೋಳವಾರು ಮಹಮದ್ ಕುಂಞÂ ಬರೆದಿರುವ, 'ಪಾಪು ಬಾಪು' ಕಿರುಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಇಲಾಖೆ ನಿರ್ಮಿಸಿರುವ ಸಾಕ್ಷ್ಯಚಿತ್ರ 'ಗಾಂಧೀ ಜೀವನ ಚರಿತ್ರೆ'ಯನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಸಾಕ್ಷ್ಯಚಿತ್ರ ಮಹಾತ್ಮ ಗಾಂಧೀಜಿಯವರ ಜೀವನದ ಪ್ರಮುಖ ಘಟನೆಗಳ ನೆನಪನ್ನು ಮರುಕಳಿಸುವಂತೆ ಮಾಡಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರು, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಆಕೃತಿ ಬನ್ಸಾಲ್, ಪಾಲಿಕೆ ಸಹಾಯಕ ಆಯುಕ್ತ ಅಜೀಜ್ ದೇಸಾಯಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯ ನಿರ್ದೇಶಕ ಮಂಜುನಾಥ ಡೊಳ್ಳಿನ, ಪಾಲಿಕೆ ವೈದ್ಯಾಧಿಕಾರಿ ಡಾ.ಪ್ರಭು ಬಿರಾದಾರ, ಹುಬ್ಬಳ್ಳಿ ನಗರ ತಹಶೀಲದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲದಾರ ಸಂಗಪ್ಪ ಬಾಡಗಿ, ಅಪರ ತಹಶೀಲದಾರ ಪ್ರಕಾಶ್ ನಾಸಿ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...