ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ 198 ಮನೆಗಳಿಗೆ ಹಾನಿ

Source: SO News | By Laxmi Tanaya | Published on 27th July 2023, 10:18 PM | State News | Don't Miss |

ಧಾರವಾಡ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 26 ರ ಬೆಳಿಗ್ಗೆ 8 ಗಂಟೆಯಿಂದ 27 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.

ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ 87, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 5 ಮತ್ತು 2 ತೀವ್ರ, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಸೇರಿದಂತೆ ಜಿಲ್ಲೆಯ 8 ತಾಲೂಕಗಳಲ್ಲಿನ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.

ಈ ಎಲ್ಲ ಪ್ರಕರಣ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಶೀಲ್ದಾರರಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ತನಿಖಾ  ತಂಡದಿಂದ ಪರಿಶೀಲನೆ ಕಾರ್ಯ ಜರುಗಿಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಏಪ್ರಿಲ್ 01 ರಿಂದ ಜುಲೈ 27 ರವರೆಗೆ ಮನೆ ಹಾನಿ: ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಹಾಗೂ ನಗರಗಳಲ್ಲಿ ಮಳೆಯಿಂದಾಗಿ ಏಪ್ರಿಲ್ 01 ರಿಂದ ಜುಲೈ 27 ರ ವರೆಗೆ 677 ಮನೆಗಳಿಗೆ ಭಾಗಶಃ ಹಾಗೂ 15 ಮನೆಗಳಿಗೆ ತೀವ್ರತರವಾಗಿ ಹಾನಿಯಾಗಿದೆ. ಒಟ್ಟಾರೆ ಇಲ್ಲಿಯವರೆಗೆ ಸುಮಾರು 692 ಮನೆಗಳಿಗೆ ಹಾನಿಯಾಗಿದ್ದು, ಈ ಕುರಿತು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ವರದಿ ಸಲ್ಲಿಸಿದ ನಂತರ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...