ಕೆಎಸ್‍ಆರ್‍ಟಿಸಿ.ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತ,ಇಬ್ಬರಿಗೆ ಗಾಯ

Source: sonews | By Staff Correspondent | Published on 8th December 2019, 11:34 PM | Coastal News | Don't Miss |

ಭಟ್ಕಳ:ಇಲ್ಲಿನ ಸರ್ಪನಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಕೆಎಸ್‍ಆರ್‍ಟಿಸಿ,ಖಾಸಗಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.

ಮಡಿಕೇರಿ ಪಿನಾರಾಯಿ ಪಟ್ಟಣದ ರಘು ಮತ್ತು ಜತೀಶ ಗಾಯಗೊಂಡವರು.ತಲೆ ಕೈಗಳಿಗೆ ಗಾಯವಾಗಿರುವ ಇವರುಗಳು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಕೆಎಸ್‍ಆರ್‍ಟಿಸಿ ಬಸ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ,ಅಂಕೋಲಾದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ.ಇದೇ ವೇಳೆ ಕೆಎಸ್‍ಆರ್‍ಟಿಸಿ ಬಸ್‍ನ ಹಿಂದೆ ಮಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ಪ್ರವಾಸಿಗರಿದ್ದ ಭಾರತಿ ಎಂಬ ಖಾಸಗಿ ಬಸ್ ಕೆಎಸ್‍ಆರ್‍ಟಿಸಿ ಬಸ್‍ಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೆ,ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್‍ನ ಮುಂಭಾಗ ಸಹ ಸಣ್ಣ ಪ್ರಮಾಣದಲ್ಲಿ ಜಖಂಗೊಂಡಿದೆ.ಈ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...