ದೀಪಾವಳಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ

Source: S O News | By Staff Correspondent | Published on 26th October 2024, 2:54 PM | State News |

ಬೆಂಗಳೂರು: ನರಕ ಚತುರ್ದಶಿ ಅಕ್ಟೋಬರ್ 31, ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್ 02 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30 ರಿಂದ ನವೆಂಬರ್ 01 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 03 ಮತ್ತು 04 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ  ರಸ್ತೆ ಸಾರಿಗೆ ನಿಗಮದ  ಮುಖ್ಯ ಸಂಚಾರ ವ್ಯವಸ್ಥಾಪಕರು ಅವರು ತಿಳಿಸಿದ್ದಾರೆ.

ಈ ಸ್ಥಳಗಳಿಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುವುದು.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

 ಪ್ರಯಾಣಿಕರು ಇ-ಟಿಕೇಟ್ ಬುಕಿಂಗ್‍ನ್ನು  ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‍ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ  ರಸ್ತೆ ಸಾರಿಗೆ ನಿಗಮದ  ಮುಖ್ಯ ಸಂಚಾರ ವ್ಯವಸ್ಥಾಪಕರು ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಫೆಂಗಲ್ ಪ್ರಭಾವ: ರಾಜ್ಯದ ವಿವಿಧೆಡೆ ವ್ಯಾಪಕ ಮಳೆ; ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ

ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನ ಕಾಲ ನಿರಂತರ ಮಳೆ ...

ಸಿಎಂ ಸಿದ್ದರಾಮಯ್ಯರಿಂದ ಪ್ರಧಾನಿ ಮೋದಿ ಭೇಟಿ; ನೀರಾವರಿ ಯೋಜನೆಗಳಿಗೆ ನೆರವು ಕೋರಿ ಮನವಿ; ನಬಾರ್ಡ್ ಸಾಲದ ಪ್ರಮಾಣ ಕಡಿತಕ್ಕೆ ಆಕ್ಷೇಪ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಭದ್ರಾ ಮೇಲ್ದಂಡೆ, ಮಹಾದಾಯಿ, ಮೇಕೆದಾಟು ನೀರಾವರಿ ...

ರಾಜ್ಯದ ಮೂರೂ ಕ್ಷೇತ್ರಗಳು ಕೈವಶ; ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಎನ್‌ಡಿಎ

ರಾಜ್ಯದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಗೆ ಕಾರಣವಾಗಿದ್ದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ...

ನ.21 ರಿಂದ ಮುರ್ಡೇಶ್ವರದಲ್ಲಿ ಮತ್ಸ ಮೇಳ; ಪ್ರಥಮ ಬಾರಿಗೆ ಉತ್ತರಕನ್ನಡದಲ್ಲಿ ಆಯೋಜನೆ; ಮೂರು ದಿನಗಳ ಕಾಲ ಮೀನು ಖಾದ್ಯ ಪ್ರಿಯರಿಗೆ ಹಬ್ಬ

ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ...